Sandip Ghosh

Kolkata: RG Kar Hospital ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಬಂಧಿಸಿದ CBI
ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅವ್ಯವಹಾರದ ಆರೋಪದ ಮೇರೆಗೆ ಸಂದೀಪ್ ಘೋಷ್ ರನ್ನು ಸಿಬಿಐ ಬಂಧಿಸಿದೆ. ಸಿಬಿಐ ಇತ್ತೀಚೆಗೆ ಘೋಷ್ ಅವರ ಅಧಿಕಾರಾವಧಿಯಲ್ಲಿ ಅಕ್ರಮಗಳ ವಿರುದ್ಧ ಎಫ್ಐಆರ್ ದಾಖಲಿಸಿತ್ತು.

RG ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಸದಸ್ಯತ್ವ ಅಮಾನತುಗೊಳಿಸಿದ IMA
ಐಎಂಎ ಕೋಲ್ಕತ್ತಾ ಘಟಕದ ಉಪಾಧ್ಯಕ್ಷರಾಗಿರುವ ಘೋಷ್ ಅವರ ಸದಸ್ಯತ್ವವನ್ನು ಅಮಾನತುಗೊಳಿಸುವ ನಿರ್ಧಾರವನ್ನು ಸಂಘದ ಶಿಸ್ತು ಸಮಿತಿ ತೆಗೆದುಕೊಂಡಿದೆ.

ಆರ್‌ಜಿ ಕಾರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಮನೆ ಸೇರಿ 14 ಕಡೆಗಳಲ್ಲಿ ಸಿಬಿಐ ದಾಳಿ
ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಉಪ ಅಧೀಕ್ಷಕ ಅಖ್ತರ್ ಅಲಿ ಮೂರು ದಿನಗಳ ಹಿಂದೆ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ದೂರಿನಲ್ಲಿ ಡಾ.ದೇಬಶಿಶ್ ಸೋಮ್ ವಿರುದ್ಧ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಅವ್ಯವಹಾರದ ಆರೋಪಗಳನ್ನು ಮಾಡಲಾಗಿತ್ತು.

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಮಾಜಿ ಪ್ರಾಂಶುಪಾಲ, ಇತರ ನಾಲ್ವರು ವೈದ್ಯರ ಪಾಲಿಗ್ರಾಫ್ ಪರೀಕ್ಷೆಗೆ ಅನುಮತಿ ಕೋರಿದ ಸಿಬಿಐ
ಘಟನೆ ನಡೆದ ದಿನದಂದು ಕರ್ತವ್ಯದಲ್ಲಿದ್ದ ಘೋಷ್ ಮತ್ತು ಇತರ ನಾಲ್ವರು ವೈದ್ಯರನ್ನು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಕರೆದೊಯ್ದು, ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ನಡೆಸಲು ಸಿಬಿಐ ಅನುಮತಿ ಕೋರಿದೆ.

