Sangolli Rayanna statue

ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ಪುನರ್ ಸ್ಥಾಪನೆ, ಕರವೇ ಕಾರ್ಯಕರ್ತರಿಂದ ಪ್ರತಿಭಟನೆ, ಪೊಲೀಸರ ಲಾಠಿಚಾರ್ಜ್
ಬೆಳಗಾವಿಯಲ್ಲಿ ಪರಿಸ್ಥಿತಿ ಕ್ಷಣದಿಂದ ಕ್ಷಣಕ್ಕೆ ಉದ್ವಿಗ್ನವಾಗುತ್ತಿದೆ. ಪುಂಡರು ನಿನ್ನೆ ನಸುಕಿನ ಜಾವ ಧ್ವಂಸಗೊಳಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸರಿಪಡಿಸಿ ಸ್ಥಳೀಯರು ಇಂದು ಭಾನುವಾರ ಪುನರ್ ಪ್ರತಿಷ್ಠಾಪಿಸಿದ್ದಾರೆ.

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಭಗ್ನ. 27 ಎಂಇಎಸ್ ಪುಂಡರಿಗೆ 27 ದಿನ ನ್ಯಾಯಾಂಗ ಬಂಧನ: ಕನ್ನಡಪ್ರಭ.ಕಾಮ್
ಬೆಳಗಾವಿ ಅಧಿವೇಶನದ ಕರ್ತವ್ಯಕ್ಕೆ ಬಂದಿದ್ದ ಸರ್ಕಾರದ ಮತ್ತು ಬೆಳಗಾವಿಯ ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಸುಮಾರು 26 ವಾಹನಗಳನ್ನು ಕಲ್ಲು ಎಸೆದು ಧ್ವಂಸಗೊಳಿಸಲಾಗಿದೆ. ಇನ್ನು ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ರಾಷ್ಟ್ರಭಕ್ತರ ಪ್ರತಿಮೆಗಳನ್ನು ಧ್ವಂಸ ಮಾಡಿದ ಪುಂಡರ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ
ಕಳೆದ ರಾತ್ರಿ ಬೆಳಗಾವಿಯಲ್ಲಿ ಪುಂಡರು ನಡೆಸಿದ ಪುಂಡಾಡಿಕೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ, ಕಾನೂನು ಸುವ್ಯವಸ್ಥೆಗೆ ಯಾರೇ ಧಕ್ಕೆ ತಂದರೂ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಈಗಾಗಲೇ ಗೃಹ ಸಚಿವರಿಗೆ ಸೂಚನೆ ನೀಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಈಗಾಗಲೇ 27 ಆರೋಪಿಗಳ ಬಂಧನವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ: 27 ಆರೋಪಿಗಳ ಬಂಧನ, ಸ್ವಯಂಪ್ರೇರಿತ ದೂರು ದಾಖಲು, ಬೆಳಗಾವಿಯಲ್ಲಿ ಸೆಕ್ಷನ್ 144 ಜಾರಿ
ಬೆಳಗಾವಿಯಲ್ಲಿ ಪುಂಡರ ಅಟ್ಟಹಾಸ ಮಿತಿಮೀರಿದೆ. ಬೆಳಗಾವಿಯಲ್ಲಿ ಕೆಲ ಪುಂಡರು ಇಂದು ನಸುಕಿನ ಜಾವ ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಭಗ್ನಗೊಳಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 27 ಮಂದಿಯನ್ನು ಬಂಧಿಸಲಾಗಿದೆ.

ರಾಯಣ್ಣ ಪ್ರತಿಮೆ ಸ್ಥಾಪನೆಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕ್ರಮ; ರಮೇಶ್ ಜಾರಕಿಹೊಳಿ
ಇಲ್ಲಿನ ಪೀರನವಾಡಿಯಲ್ಲಿ ಸ್ಥಾಪಿಸಿದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಪೀರನವಾಡಿಯಲ್ಲಿ ಉದ್ವಿಗ್ನ ಸ್ಥಿತಿ, ಲಾಠಿ ಪ್ರಹಾರ: ಶಾಂತಿ ಕಾಪಾಡುವಂತೆ ಸಿಎಂ ಮನವಿ
ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿರೋಧಿಸಿ ನೆಡೆದ ಗಲಾಟೆ ಹಾಗೂ ಲಾಠಿ ಚಾರ್ಜ್ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿ ಜೊತೆ ಮಾತನಾಡುತ್ತೇನೆ ಎಂದು ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

