Santhosh Ananddram

ರಾಜ್ಯದಾದ್ಯಂತ 350ಕ್ಕೂ ಹೆಚ್ಚು ತೆರೆಗಳಲ್ಲಿ ಅಬ್ಬರಿಸಲು 'ಯುವ' ಸಿನಿಮಾ ಸಜ್ಜು!
ದೊಡ್ಮನೆ ಕುಡಿ ಯುವ ರಾಜ್‌ಕುಮಾರ್ ಅವರ ಬಹುನಿರೀಕ್ಷಿತ 'ಯುವ' ಚಿತ್ರವು ಮಾರ್ಚ್ 29ರಂದು ತೆರೆಗೆ ಬರಲು ಸಜ್ಜಾಗಿದ್ದು, ವ್ಯಾಪಕ ನಿರೀಕ್ಷೆ ಹುಟ್ಟುಹಾಕಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಟ್ರೇಲರ್ ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ಘೋಷಿಸಿದೆ. ಸಿಂಗಲ್ ಸ್ಕ್ರೀನ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ಸೇರಿದಂತೆ 350ಕ್ಕೂ ಹೆಚ್ಚು ಪರದೆಗಳಲ್ಲಿ ಚಿತ್ರ ಪ್ರದರ್ಶನಕ್ಕೆ ಸಜ್ಜಾಗಿದೆ.

ಯುವ ರಾಜ್‌ಕುಮಾರ್ ನಟನೆಯ 'ಯುವ' ಬಿಡುಗಡೆಗೆ ಸಜ್ಜು; ಆಡಿಯೋ ಹಕ್ಕು ಭಾರಿ ಬೆಲೆಗೆ ಮಾರಾಟ!
ತಮ್ಮ ಚೊಚ್ಚಲ ಚಿತ್ರದೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧರಾಗಿರುವ ರಾಜ್‌ಕುಮಾರ್ ಅವರ ಮೊಮ್ಮಗ ಯುವ ರಾಜ್‌ಕುಮಾರ್ ಅವರ ಯುವ ಚಿತ್ರದ ಸುತ್ತ ವ್ಯಾಪಕ ನಿರೀಕ್ಷೆ ಮನೆಮಾಡಿದೆ. ಚಿತ್ರದ ಆಡಿಯೋ ಹಕ್ಕುಗಳನ್ನು ಆನಂದ್ ಆಡಿಯೋ ಮ್ಯೂಸಿಕ್ ಲೇಬಲ್ 3 ಕೋಟಿಗೂ ಹೆಚ್ಚು ಬೆಲೆಗೆ ಪಡೆದುಕೊಂಡಿದೆ ಎಂದು ವರದಿಯಾಗಿದೆ.

ದೊಡ್ಮನೆ ಕುಡಿ ಯುವ ರಾಜಕುಮಾರ್ ಅಭಿನಯದ 'ಯುವ' ಸಿನಿಮಾ ಬಿಡುಗಡೆ ದಿನಾಂಕ ಮುಂದಕ್ಕೆ!
ಸಂತೋಷ್ ಆನಂದ್‌ರಾಮ್ ನಿರ್ದೇಶನದ 'ಯುವ' ಚಿತ್ರದ ಮೂಲಕ ದೊಡ್ಮನೆ ಕುಡಿ ಯುವ ರಾಜ್‌ಕುಮಾರ್ ಅವರನ್ನು ಸ್ಯಾಂಡಲ್‌ವುಡ್‌ಗೆ ಪರಿಚಯಿಸುತ್ತಿರುವ ಪ್ರೊಡಕ್ಷನ್ ಹೌಸ್ ಹೊಂಬಾಳೆ ಫಿಲ್ಮ್ಸ್ ಆರಂಭದಲ್ಲಿ ಡಿಸೆಂಬರ್ 22ರಂದು ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸಿತ್ತು. ಈಗ ಯುವ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲು ಹೊಂಬಾಳೆ ಫಿಲ್ಮ್ಸ್ ನಿರ್ಧರಿಸಿದೆ.

ಐಪಿಎಲ್ ನಡುವೆಯೂ ರಾಘವೇಂದ್ರ ಸ್ಟೋರ್ಸ್ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ; ವಿಜಯ್ ಕಿರಗಂದೂರು ಬಗ್ಗೆ ಜಗ್ಗೇಶ್ ಹೇಳಿದ್ದೇನು?
ಐಪಿಎಲ್ ಮತ್ತು ಕರ್ನಾಟಕ ಚುನಾವಣೆಗಳ ಝೇಂಕಾರದ ನಡುವೆಯೇ ಏಪ್ರಿಲ್ 28 ರಂದು ಬಿಡುಗಡೆಯಾದ ರಾಘವೇಂದ್ರ ಸ್ಟೋರ್ಸ್ ಚಿತ್ರಕ್ಕೆ ಸಿಕ್ಕಿರುವ ಸಕಾರಾತ್ಮಕ ಪ್ರತಿಕ್ರಿಯೆಯ ಬಗ್ಗೆ ಚಿತ್ರತಂಡ ಸಂತೋಷ ವ್ಯಕ್ತಪಡಿಸಿದೆ.

'ರಾಘವೇಂದ್ರ ಸ್ಟೋರ್ಸ್' ನಂತಹ ಕಮರ್ಷಿಯಲ್ ಚಿತ್ರಕ್ಕೆ ಆಯ್ಕೆಯಾಗುತ್ತೇನೆಂದು ಭಾವಿಸಿರಲಿಲ್ಲ: ಶ್ವೇತಾ ಶ್ರೀವಾತ್ಸವ್
ನಟಿ ಶ್ವೇತಾ ಶ್ರೀವಾತ್ಸವ್ ರಾಘವೇಂದ್ರ ಸ್ಟೋರ್ಸ್‌ಗೆ ಬರುವವರೆಗೂ ಮುಖ್ಯವಾಹಿನಿಯ ಸಿನಿಮಾದಲ್ಲಿ ಅವಕಾಶ ಸಿಗುತ್ತದೆ ಅಂದುಕೊಂಡಿರಲ್ಲವಂತೆ. ಹೊಂಬಾಳೆ ಫಿಲಂಸ್ ಮತ್ತು ನಿರ್ದೇಶಕ ಸಂತೋಷ್ ಆನಂದ್‌ರಾಮ್ ಅವರಂತಹ ದೊಡ್ಡ ನಿರ್ದೇಶಕರು ಹಾಗೂ ನಿರ್ಮಾಣ ಸಂಸ್ಥೆ ತನ್ನನ್ನು ಸಂಪರ್ಕಿಸಿದಾಗ ಮಿಶ್ರ ಭಾವನೆ ಹೊಂದಿದ್ದಾಗಿ ತಿಳಿಸಿದ್ದಾರೆ.

ಜಗ್ಗೇಶ್ ಅಭಿನಯದ ರಾಘವೇಂದ್ರ ಸ್ಟೋರ್ಸ್ ಚಿತ್ರದ ಟ್ರೈಲರ್
ನವರಸ ನಾಯಕ ಜಗ್ಗೇಶ್ ಅಭಿನಯದ ರಾಘವೇಂದ್ರ ಸ್ಟ್ರೋರ್ಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್ ಚಿತ್ರ ನಿರ್ಮಾಣ ಮಾಡಿದ್ದು, ಹಿರಿಯ ನಟ ದತ್ತಣ್ಣ ಪ್ರಮುಖ ಪಾತ್ರದಲ್ಲಿ

ಯುವ ರಾಜಕುಮಾರ್ ಅಭಿನಯದ ಚೊಚ್ಚಲ ಚಿತ್ರ 'ಯುವ' ಟೈಟಲ್ ಟೀಸರ್
ಡಾ. ರಾಜಕುಮಾರ್ ಕುಡಿ ಯುವ ರಾಜಕುಮಾರ್ ಅಭಿನಯದ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಯುವ ಚಿತ್ರ ಟೈಟಲ್ ಟೀಸರ್ ಬಿಡುಗಡೆಯಾಗಿದ್ದು ಚಿತ್ರವನ್ನು ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ.

ಮಜವಾಗಿದೆ 'ರಾಘವೇಂದ್ರ ಸ್ಟೋರ್ಸ್' ಟೀಸರ್
ನವರಸ ನಾಯಕ ಜಗ್ಗೇಶ್ ಅಭಿನಯದ ಮತ್ತು ಯುವರತ್ನ ಖ್ಯಾತಿಯ ಸಂತೋಷ್ ಆನಂದ್ ರಾಮ್ ನಿರ್ದೇಶನದ 'ರಾಘವೇಂದ್ರ ಸ್ಟೋರ್ಸ್' ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಜಗ್ಗೇಶ್ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಪುನೀತ್ ರಾಜ್ ಕುಮಾರ್- ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನಲ್ಲಿ ಮತ್ತೊಂದು ಆ್ಯಕ್ಷನ್ ಸಿನಿಮಾ
ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯೊಂದೇ ತನ್ನ ಬ್ಯಾನರ್ನಲ್ಲಿ ಬಿಗ್ ಬಜೆಟ್ನ ಹಲವು ಚಿತ್ರಗಳನ್ನು ಘೋಷಿಸಿದೆ. ಚಂದನವನದ ಹಿಟ್ ಕಾಂಬಿನೇಷನ್ನಲ್ಲಿ ಒಂದಾದ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜಕುಮಾರ್ ಜೋಡಿ ಮತ್ತೆ ಒಂದಾಗುವುದು ಪಕ್ಕಾ ಆಗಿದೆ.

