Satish Jarkiholi

ಸರ್ವರ್ ಡೌನ್ ಸಮಸ್ಯೆ; ಕೇಂದ್ರ ಸರ್ಕಾರ ರಾಜ್ಯದ ಸರ್ವರ್ ಹ್ಯಾಕ್ ಮಾಡಿದೆ: ಸತೀಶ್ ಜಾರಕಿಹೊಳಿ ಆರೋಪ
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಫಲಾನುಭವಿಗಳಾಗಲು ರಾಜ್ಯದ ಜನತೆ ಅರ್ಜಿ ಸಲ್ಲಿಸಲು ಮುಂದಾಗುತ್ತಿರುವುದರಿಂದ ಸರ್ವರ್ ಡೌನ್ ಸಮಸ್ಯೆ ಎದುರಾಗುತ್ತಿದೆ. ಹೀಗಾಗಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ.

ಐದು ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ: ಸಚಿವ ಸತೀಶ್ ಜಾರಕಿಹೊಳಿ
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ರಾಜ್ಯದಲ್ಲಿ ಮುಂದಿನ ಐದು ವರ್ಷ ಆಡಳಿತ ನಡೆಸುತ್ತಾರೆ. ಅಧಿಕಾರ ಪೂರೈಸುವ ವಿಶ್ವಾಸ ನನಗಿದೆ ಎಂದು ಲೋಕೋಪಯೋಗಿ ಸಚಿವ ಹಾಗೂ ಸಿದ್ದರಾಮಯ್ಯರ ಆಪ್ತರಾಗಿರುವ ಸತೀಶ್ ಜಾರಕಿಹೊಳಿ ಅವರು ಭಾನುವಾರ ಹೇಳಿದರು.

ಕಳಪೆ ಗುಣಮಟ್ಟದ ಕಾಮಗಾರಿಯನ್ನು ಸಹಿಸುವುದಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಮಳೆ ನೀರು ಹೋಗಲು ತೊಂದರೆಯಾದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಾಮಗಾರಿ ಗುತ್ತಿಗೆ ಪಡೆದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ, ನಗರಾಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಕುರಿತು ಪ್ರತ್ಯೇಕ ತನಿಖೆ: ಸತೀಶ್ ಜಾರಕಿಹೊಳಿ
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಬುಡಾ) ನಡೆದಿರುವ ಅವ್ಯವಹಾರಗಳನ್ನು ಸಹಿಸುವುದಿಲ್ಲ, ಸತ್ಯಾಂಶ ತಿಳಿಯಲು ಎಲ್ಲಾ ಅವ್ಯವಹಾರಗಳ ಬಗ್ಗೆ ಸಿಐಡಿ ತನಿಖೆ ನಡೆಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಮಂಗಳವಾರ ಹೇಳಿದರು.

ಮುಂದೊಂದು ದಿನ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗ್ತಾರೆ: ಲಕ್ಷ್ಮಿ ಹೆಬ್ಬಾಳ್ಕರ್
ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ, ಮುಂದೆ ಮುಖ್ಯಮಂತ್ರಿ ಕೂಡ ಆಗುವ ಎಲ್ಲ ಅರ್ಹತೆ ಇದೆ. ಅದಕ್ಕೆ ಕಾಲ ಕೂಡಿ ಬರಬೇಕು ಅಷ್ಟೆಎಂದು ನೂತನ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಅದ್ಧೂರಿ ಸ್ವಾಗತಕ್ಕೆ ಬೆಳಗಾವಿ ಸಜ್ಜು
ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಲು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಿದ್ಧತೆಗಳ ನಡೆಸುತ್ತಿದ್ದಾರೆ.

ಮೂಢನಂಬಿಕೆ ಬದಿಗಿಟ್ಟು ರಾಹುಕಾಲದಲ್ಲಿ ನಾಮಪತ್ರ ಸಲ್ಲಿಕೆ: ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು
ಕಾಂಗ್ರೆಸ್ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದು, 2020ರಲ್ಲಿಯೇ ತೆಗೆದುಕೊಂಡಿದ್ದ ಹೊಸ ಕಾರಿಗೆ 2023 ಎಂದು ನಂಬರ್ ಪ್ಲೇಟ್ ಹಾಕಿಸಿ ಸ್ಮಶಾನದಲ್ಲಿ ಪೂಜೆ ಮಾಡಿಸಿದ್ದ ಸತೀಶ್ ಜಾರಕಿಹೊಳಿ ಅವರ ಭವಿಷ್ಯ ನಿಜವಾಗಿದೆ.

ಸಿಎಂ ಆಯ್ಕೆ ಮಧ್ಯೆ ಹೆಚ್ಚಿದ ಡಿಸಿಎಂ ಕೂಗು, ಶುರುವಾಯ್ತು ಪೈಪೋಟಿ: ಸತೀಶ್ ಜಾರಕಿಹೊಳಿಗೆ ಸ್ಥಾನ ನೀಡುವಂತೆ ಹಲವರು ಒತ್ತಾಯ
ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಸಂಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿಯಲು ಸಿದ್ಧಗೊಂಡಿದೆ. ಅಧಿಕಾರಕ್ಕೇರುವ ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಆಯ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಈ ನಡುವಲ್ಲೇ ಉಪ ಮುಖ್ಯಮಂತ್ರಿ ಸ್ಥಾನಕ್ಕೂ ಪೈಪೋಟಿ ಶುರುವಾಗಿದೆ.

ನಿಸ್ಸಂದೇಹವಾಗಿ ಈ ಬಾರಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ: ಸತೀಶ್ ಜಾರಕಿಹೊಳಿ (ಸಂದರ್ಶನ)
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಗೋಕಾಕದ ಅನುಭವಿ ರಾಜಕಾರಣಿ ಸತೀಶ ಜಾರಕಿಹೊಳಿ ಅವರು ಹಲವಾರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದು, ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುವ ಮೂಲಕ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ.

