scam

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ, ಲೋಕಸಭೆ ಚುನಾವಣೆ ಫಲಿತಾಂಶ: ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ!
ಕರ್ನಾಟಕ ಸರ್ಕಾರ ಇತ್ತೀಚೆಗಷ್ಟೇ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ್ದರೂ ಕಾಂಗ್ರೆಸ್‌ನಲ್ಲಿ ಸಂಭ್ರಮಾಚರಣೆಯ ಲಕ್ಷಣಗಳು ಕಾಣುತ್ತಿಲ್ಲ. ಇದಕ್ಕೆ ತದ್ವಿರುದ್ಧವಾಗಿ, ಇದ್ದಕ್ಕಿದ್ದಂತೆ ಅಹಿತಕರ ಸನ್ನಿವೇಶದ ಕೋಲಾಹಲವನ್ನು ಎದುರಿಸುತ್ತಿದೆ.

ರಾಹುಲ್ ಸಭೆಯ ಉದ್ದೇಶ ಹಗರಣಗಳ ಮುಚ್ಚಿ ಹಾಕುವುದಾ? ಅಥವಾ..: ಬಿಜೆಪಿ ಪ್ರಶ್ನೆ
ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ರಾಜೀನಾಮೆಯೇ? ಪಕ್ಷದಿಂದ ಉಚ್ಚಾಟಿಸುವಿರಾ? ಅವರನ್ನು ಬಂಧಿಸುವಿರಾ? ಸಾಕ್ಷಿ ನಾಶ ಮಾಡುವ ಬಗ್ಗೆ ಮಹತ್ವದ ಸಭೆ ನಡೆಸಿದ್ದ ಸಚಿವ ಶರಣಪ್ರಕಾಶ್ ಪಾಟೀಲರನ್ನು ಬಂಧಿಸುವಿರಾ? ಅವರ ಉಚ್ಚಾಟನೆ ಮಾಡುವಿರಾ?
ಸರ್ಕಾರದ ಅನುಮತಿ ಇಲ್ಲದಿದ್ದರೂ ತನಿಖೆ ನಡೆಸಲು CBI ಗೆ ಅವಕಾಶ ಇದೆ: DCM ಡಿ.ಕೆ ಶಿವಕುಮಾರ್
ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಅಕ್ರಮ ನಡೆದರೆ ಸರ್ಕಾರ ಅನುಮತಿ ಇಲ್ಲದಿದ್ದರೂ ತನಿಖೆ ನಡೆಸಲು ಸಿಬಿಐಗೆ ಅವಕಾಶ ಇದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದರು.

ಸಚಿವ ನಾಗೇಂದ್ರ ರಾಜೀನಾಮೆ ನಾನು ಕೇಳಿಲ್ಲ: ಸಿಎಂ ಸಿದ್ದರಾಮಯ್ಯ; ಬಿಜೆಪಿ ನಾಯಕರಿಂದ ರಾಜಭವನ ಚಲೋ, ಮನವಿ ಸಲ್ಲಿಕೆ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಿಂದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐಗೆ ರಾಜ್ಯ ಸರ್ಕಾರ ಅಧಿಕೃತವಾಗಿ ವಹಿಸಬೇಕು ಮತ್ತು ಸಚಿವ ಬಿ ನಾಗೇಂದ್ರ ಅವರು ರಾಜೀನಾಮೆ ನೀಡಬೇಕೆಂಬ ಆಗ್ರಹ ಬಿಜೆಪಿ ನಾಯಕರಿಂದ ಹೆಚ್ಚಾಗುತ್ತಿರುವ ಹೊತ್ತಿನಲ್ಲಿ ತಾವು ಸಚಿವರ ರಾಜೀನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.

ಸಿಇಟಿ ಫಲಿತಾಂಶ ವಿಳಂಬದಿಂದ 3 ಸಾವಿರ ಕೋಟಿ ರೂ. ಹಗರಣ: AAP ಆರೋಪ
ಸಿಇಟಿ ಫಲಿತಾಂಶ ಪ್ರಕಟಿಸಲು ಸರ್ಕಾರ ವಿಳಂಬ ಮಾಡುವ ಮೂಲಕ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಅನುಕೂಲ ಮಾಡಿಕೊಟ್ಟಿದ್ದು, ಇದು ಸುಮಾರು 3 ಸಾವಿರ ಕೋಟಿ ರೂ.ಗಳ ಹಗರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ.

ಆನ್ ಲೈನ್ ನಲ್ಲಿ ಮದ್ಯ ಖರೀದಿಸಲು ಹೋಗಿ 3.38 ಲಕ್ಷ ರೂ. ಕಳೆದುಕೊಂಡ ಫೈನಾನ್ಸ್ ಅನಾಲಿಸ್ಟ್!
ಮತ್ತೊಂದು ಆನ್‌ಲೈನ್ ವಂಚನೆ ಪ್ರಕರಣದಲ್ಲಿ, 41 ವರ್ಷದ ಫೈನಾನ್ಸ್ ಅನಾಲಿಸ್ಟ್ ಆನ್‌ಲೈನ್‌ನಲ್ಲಿ ಮದ್ಯ ಖರೀದಿಸಲು ಹೋಗಿ 3.38 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮೋಸಗೊಳಗಾದವರು ದೇಬಾಶಿಶ್ ಬಯೆನ್ ಎಂದು ಗುರುತಿಸಲಾಗಿದೆ.

ಎಸ್‌ಸಿ/ಎಸ್‌ಟಿ ಮೀಸಲಾತಿ ನೆಪದಲ್ಲಿ ಹೊಸ ಮದ್ಯದಂಗಡಿ ತೆರೆಯದಿರಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ
ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿ ನೀಡುವ ನೆಪದಲ್ಲಿ ಹೊಸ ಮದ್ಯದಂಗಡಿ ತೆರೆಯಲು ಪರವಾನಗಿ ನೀಡದಂತೆ ಪ್ರತಿಪಕ್ಷ ಬಿಜೆಪಿ ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಯುಕೋ ಬ್ಯಾಂಕ್ ನ 820 ಕೋಟಿ ರೂ ಹಗರಣ: ರಾಜ್ಯದ 13 ಸ್ಥಳಗಳಲ್ಲಿ ಸಿಬಿಐ ಶೋಧ
ಯುಕೊ ಬ್ಯಾಂಕ್‌ನಲ್ಲಿ ನಡೆದಿದ ಎನ್ನಲಾದ 820 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮಂಗಳೂರು ಸೇರಿದಂತೆ ಕರ್ನಾಟಕದ 13 ಸ್ಥಳಗಳಲ್ಲಿ ಶೋಧ ನಡೆಸಿದೆ.

ಬೋವಿ ನಿಗಮದ ಮಾಜಿ ಎಂಡಿ, ಸಿಬ್ಬಂದಿಗಳಿಂದ 97 ಕೋಟಿ ರೂಪಾಯಿ ದುರುಪಯೋಗ: ಸಿಐಡಿ ವರದಿ ಸಲ್ಲಿಕೆ
ಕರ್ನಾಟಕ ಬೋವಿ ಅಭಿವೃದ್ಧಿ ನಿಗಮಕ್ಕೆ (KBDC) ಉದ್ಯೋಗ ಯೋಜನೆಯಡಿ ರಾಜ್ಯ ಸರ್ಕಾರ ನೀಡಿದ್ದ 97 ಕೋಟಿ ರೂಪಾಯಿಗೂ ಅಧಿಕ ಮೊತ್ತ ಹಣವನ್ನು 500 ಮಂದಿ ಫಲಾನುಭವಿಗಳ ಹೆಸರಿನಲ್ಲಿ ಅಕ್ರಮವಾಗಿ ಬಳಕೆ ಮಾಡಲಾಗಿದೆ ಎಂದು ಅಪರಾಧ ತನಿಖಾ ಇಲಾಖೆ (CID) ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.

