ರಾಜ್ಯನಾಳೆ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ: ಸಭಾಪತಿ ಬಸವರಾಜ ಹೊರಟ್ಟಿ ತೀರ್ಮಾನ
ನಾಳೆ ಬೆಳಗ್ಗೆ 10-30ಕ್ಕೆ ವಿಧಾನಮಂಡಲ ಅಧಿವೇಶನವನ್ನು ಆರಂಭಿಸಲಾಗುತ್ತದೆ. ಮೊದಲ ಒಂದು ಗಂಟೆ ಪ್ರಶ್ನೋತ್ತರಗಳಿಗೆ ಅವಕಾಶ ಕಲ್ಪಿಸಿ, ನಂತರ ಇಡೀ ದಿನದ ಕಲಾಪವನ್ನು ಉತ್ತರ ಕರ್ನಾಟಕ ಭಾಗದಲ್ಲಿ ಸಮಸ್ಯೆಗಳನ್ನು ಚರ್ಚಿಸಲು ಮೀಸಲಿಡಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.