ರಾಜ್ಯಶಾಲಾ ವಾಹನ ಚಾಲಕರು, ಸಹಾಯಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ಕಡ್ಡಾಯ
ಶಾಲಾ ಮಕ್ಕಳನ್ನು ಕರೆತರುವ ಎಲ್ಲಾ ಬಗೆಯ ವಾಹನಗಳ ಚಾಲಕರು ಮತ್ತು ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆಯ ಪ್ರಮಾಣಪತ್ರ ಸಲ್ಲಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ ಮತ್ತು ಅದನ್ನು ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ಸಿಸ್ಟಂ (ಎಸ್ಟಿಎಸ್) ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಬೇಕು ಎಂದು ಸುತ್ತೋಲೆ ಹೊರಡಿಸಿದೆ.