ರಾಜ್ಯಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಮತ್ತೊಂದು ಘಟನೆ: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ವಿಡಿಯೋ ವೈರಲ್
ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪದೇ ಪದೆ ಎಚ್ಚರಿಕೆ ನೀಡುತ್ತಿದ್ದರೂ, ಅದನ್ನು ಲೆಕ್ಕಿಸದೆ ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯವನ್ನು ಸ್ವಚ್ಛ ಮಾಡಿಸಿರುವ ಮತ್ತೊಂದು ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.