school

ಬೆಂಗಳೂರು ಹೊರವಲಯದಲ್ಲಿ ಶಾಲೆಗಳ ನಿರ್ಮಾಣಕ್ಕೆ ಬಿಬಿಎಂಪಿ ಮುಂದು
ತನ್ನ ವ್ಯಾಪ್ತಿಯಲ್ಲಿರುವ ಶಾಲೆಗಳನ್ನು ನವೀಕರಿಸಲು ಹಾಗೂ ನಗರದ ಹೊರವಲಯದಲ್ಲಿ ಶಾಲೆಗಳ ನಿರ್ಮಿಸಲು ಬಿಬಿಎಂಪಿ ಮುಂದಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಅಬ್ಬರ: ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಸಂಖ್ಯೆ ಇಳಿಕೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ನಿಧಾನವಾಗಿ ಮತ್ತೆ ಏರಿಕೆಯಾಗುತ್ತಿದ್ದು, ಈ ನಡುವೆ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ತಿಳಿದುಬಂದಿದೆ.

ಗಿಡ-ಮರ, ಹೂವು-ಹಣ್ಣು-ತರಕಾರಿ ಮಧ್ಯೆ ಬೆಳೆಯುವ ಕಾರವಾರದ ಸರ್ಕಾರಿ ಶಾಲೆ ಮಕ್ಕಳು, ಇವರಿಗೆ ಗ್ರಾಮಸ್ಥರೇ ಬೋಧಕರು!
ಸರ್ಕಾರಿ ಶಾಲೆಗಳಲ್ಲಿ ಪಾಠ ಎಂದಾಕ್ಷಣ ಸಾಮಾನ್ಯವಾಗಿ ನಮ್ಮ ಕಣ್ಣಮುಂದೆ ಬರುವುದು ವಿದ್ಯಾರ್ಥಿಗಳು ಶಿಕ್ಷಕರ ಪಾಠಗಳನ್ನು ಕುಳಿತು ಆಲಿಸುವುದು, ಟಿಪ್ಪಣಿಗಳನ್ನು ತೆಗೆದುಕೊಳ್ಳುವುದು, ಮುಂದಿನ ಪರೀಕ್ಷೆಯ ಬಗ್ಗೆ ಚಿಂತಿಸುತ್ತಾ ಪ್ರಶ್ನೆಗಳನ್ನು ಕೇಳುವುದು ಇತ್ಯಾದಿ.

ನರೇಂದ್ರ ಮೋದಿ ಭೇಟಿ ವೇಳೆ ಕಾಲೇಜುಗಳಿಗೆ ಯಾಕೆ ರಜೆ ಕೊಡಬೇಕು? ವಿದ್ಯಾರ್ಥಿಗಳೇನು ಟೆರರಿಸ್ಟ್ ಗಳಾ?
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾದು ಹೋಗುವ ಮಾರ್ಗದಲ್ಲಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳು ಏನು ಟೆರರಿಸ್ಟ್ ಗಳಾ ? ಮೋದಿ ಬಂದು ಹೋಗಲಿ ಬೇಡ ಅಂದವರು ಯಾರು.

ನಾಳೆ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ: ಆಯ್ದ ಮಾರ್ಗಗಳ ಕಾಲೇಜುಗಳಿಗೆ ರಜೆ
ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ನಗರಕ್ಕೆ ಆಗಮಿಸುತ್ತಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ, ಪ್ರಧಾನಿ ಸಂಚರಿಸಲಿರುವ ಮಾರ್ಗದಲ್ಲಿ ಬರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂದು ಬಿಗಿಭದ್ರತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಕೋವಿಡ್ ನಾಲ್ಕನೇ ಅಲೆ ಭೀತಿ: ಬೆಂಗಳೂರಿನ ಎರಡು ಶಾಲೆಗಳಲ್ಲಿ ಕೊರೋನಾ ಸ್ಫೋಟ; ಕಂಟೈನ್ ಮೆಂಟ್ ವಲಯ 21ಕ್ಕೆ ಏರಿಕೆ!
ದೇಶಾದ್ಯಂತ ಕೋವಿಡ್ 4ನೇ ಅಲೆಯ ಭೀತಿಯ ನಡುವೆ ಈಗಾಗಲೇ ಶಾಲಾ-ಕಾಲೇಜುಗಳು ಆರಂಭವಾಗಿವೆ. 2020ರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ನಂತರ ಸುಮಾರು 2 ವರ್ಷಗಳ ಕಾಲ ಸರಿಯಾಗಿ ಶಾಲಾ-ಕಾಲೇಜುಗಳು ಭೌತಿಕವಾಗಿ ನಡೆದಿರಲಿಲ್ಲ.

ಮಂಗಳೂರು: ಪೋಷಕರೊಂದಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು; ಶಾಲೆ ವಿರುದ್ಧ ಪ್ರಕರಣ
ತಾಯಿಯೊಂದಿಗೆ ಫೋನ್ ನಲ್ಲಿ ಮಾತನಾಡಲು ಅವಕಾಶ ನೀಡದ್ದಕ್ಕೆ ನೊಂದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗ ಘಟನೆ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ನಡೆದಿದೆ.

ತಮಿಳು ನಾಡಿನ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆ: ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ವರ್ಷಾಂತ್ಯಕ್ಕೆ ತಮಿಳು ನಾಡಿನ ರಾಜಧಾನಿ ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅನೇಕ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿವೆ. ಹಲವು ಪ್ರದೇಶಗಳು ಜಲಾವೃತವಾಗಿವೆ. ಅಗತ್ಯ ಸೇವೆಗಳು ಹೊರತುಪಡಿಸಿ ಉಳಿದೆಲ್ಲಾ ಸರ್ಕಾರಿ ಕಚೇರಿಗಳು ಇಂದು ಶುಕ್ರವಾರ ಚೆನ್ನೈ, ತಿರುವಲ್ಲೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಮುಚ್ಚಿವೆ.

ಶಾಲಾ ಶುಲ್ಕ ಪಾವತಿಸದ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಶಿಕ್ಷೆ: ಪೋಷಕರ ಆರೋಪ
ವಿದ್ಯಾರ್ಥಿಗಳು ಶುಲ್ಕ ಪಾವತಿಸದ ಕಾರಣಕ್ಕೆ ಶಿಕ್ಷೆಗೆ ಗುರಿಯಾಗಿದ್ದಾರೆ ಎಂದು ಆರೋಪಿಸಿ ಹಲವಾರು ಪೋಷಕರು ಶಾಲಾ ಆಡಳಿತ ಮಂಡಳಿಯೊಂದಿಗೆ ವಾಗ್ವಾದ ನಡೆಸಿದರು. ಆದಾಗ್ಯೂ, ಈ ಆರೋಪಗಳು ಸುಳ್ಳು, ಪೋಷಕರು 2019 ರಿಂದ ಶುಲ್ಕವನ್ನು ಪಾವತಿಸಿಲ್ಲ ಎಂದು ಅಮರವಾಣಿ ಪ್ರೌಢಶಾಲೆಯ ಆಡಳಿತ ಮಂಡಳಿ ಹೇಳಿಕೆ ನೀಡಿದೆ.

