school

ಮುಂದುವರೆದ ಹುಚ್ಚಾಟ: ನಗರದಲ್ಲಿ ಪ್ರತಿಷ್ಟಿತ ಶಾಲೆಗಳಿಗೆ ಬಾಂಬ್ ಬೆದರಿಕೆ; ಪೊಲೀಸರಿಂದ ಪರಿಶೀಲನೆ
ದೇಶಾದ್ಯಂತ ಶಾಲೆಗಳಿಗೆ ಬಾಂಬ್ ಇಡಲಾಗಿದೆ ಎಂಬ ಹುಸಿ ಕರೆಗಳು ಬರುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ನಕಲಿ ಬೆದರಿಕೆ ಕರೆ ಎಂದು ತಿಳಿದಿದ್ದರೂ ಉದಾಸೀನ ಮಾಡುವಂತಿಲ್ಲ. ನಗರದಲ್ಲಿ ಮಂಗಳವಾರ ಕನಿಷ್ಟ 8 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಗಳು ಬಂದು, ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಕಾಫಿ, ಟೀಗೆ ಲಕ್ಷಾಂತರ ವೆಚ್ಚ ಮಾಡುವವರಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ ಭರಿಸಲಾಗದೇ?: ಸರ್ಕಾರದ ವಿರುದ್ಧ ಹೈಕೋರ್ಟ್ ಆಕ್ರೋಶ
ನಿಮ್ಮ ಕಚೇರಿಯಲ್ಲಿ ಕಾಫಿ, ಟೀಗೆ ಪ್ರತಿ ತಿಂಗಳಿಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತದೆ. ಆದರೆ, ಬಡ ಕಾರ್ಮಿಕರ ಪುತ್ರಿಯರ ಶಿಕ್ಷಣದ ಖರ್ಚು ಭರಿಸಲು ನಿಮಗೆ ಆಗದೇ? ಇಂಥ ಮಕ್ಕಳ ಸಹಾಯಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು. ಸೆಸ್ ಸಂಗ್ರಹಿಸಿರುವುದು ಅವರಿಗಾಗಿ ಅಲ್ಲವೇ? ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತು.

ಶಾಲಾಪೂರ್ವ ಮಕ್ಕಳ ಆಹಾರ (ಕುಶಲವೇ ಕ್ಷೇಮವೇ)
ಮಕ್ಕಳು ಶಾಲಾಪೂರ್ವ ವಯಸ್ಸಿನಲ್ಲಿ ಬಹುಬೇಗನೇ ಬೆಳೆಯುತ್ತವೆ. ಆದ್ದರಿಂದ ಅವರ ಬೆಳವಣಿಗೆಗೆ ಪೂರಕ ಮತ್ತು ಸಹಾಯಕವಾದ ಆಹಾರವನ್ನು ನೀಡಬೇಕು.

ವಸತಿ ಶಾಲೆಗಳಲ್ಲಿ ಘೋಷವಾಕ್ಯ ಏಕೆ ಬದಲಿಸಿದ್ದಾರೋ ಕಾರಣ ಗೊತ್ತಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ವಿದ್ಯೆ ಅಂದರೆ ಸರಸ್ವತಿ. ಕೈ ಮುಗಿಯುವುದು ನಮ್ಮ ಸಂಪ್ರದಾಯ. ಅದು ಭಿಕ್ಷೆ ಬೇಡುವುದು ಅಲ್ಲ ಎಂಬುದು ನನ್ನ ಅಭಿಪ್ರಾಯ.

ʻತೆರೆದ ಮನೆʼ ಕಾರ್ಯಕ್ರಮದಡಿ ಮಕ್ಕಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿ: ರಾಜ್ಯದ ಎಲ್ಲಾ ಶಾಲೆಗಳಿಗೆ ಸರ್ಕಾರ ಸೂಚನೆ
ʻತೆರೆದ ಮನೆʼ ಕಾರ್ಯಕ್ರಮದಡಿ ಮಕ್ಕಳಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿ ಎಂದು ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಶಾಲಾ ಸ್ವಚ್ಛತೆ ಕಲಿಕೆಯ ಭಾಗವಾಗಬೇಕು; ಶಿಕ್ಷಕರು- ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು: SDMC
ಪ್ರತಿಯೊಬ್ಬರೂ ಬಳಸುವ ಶಾಲೆಗಳಲ್ಲಿ ನಿರ್ದಿಷ್ಟ ಜಾತಿ ಅಥವಾ ಸಮುದಾಯದ ವಿದ್ಯಾರ್ಥಿಗಳನ್ನು ಶೌಚಾಲಯ ಸ್ವಚ್ಛಗೊಳಿಸುವ ಕ್ರಮವನ್ನು ಬಲವಾಗಿ ಖಂಡಿಸುತ್ತದೆ ಎಂದು ವೇದಿಕೆಯ ಅಧಿಕೃತ ಪ್ರಕಟಣೆ ತಿಳಿಸಿದೆ.

ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ್ದ ಪ್ರಕರಣ: ಮುಖ್ಯ ಶಿಕ್ಷಕಿ ಬಂಧನ
ಅಂದ್ರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಚಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಶಾಲಾ-ಕಾಲೇಜು, ಕೈಗಾರಿಕೆಗಳ ಸಮಯ ಬದಲಾವಣೆ ಮಾಡಲು ಸಾಧ್ಯವಿಲ್ಲ: ಹೈಕೋರ್ಟ್‌ಗೆ ಸರ್ಕಾರದ ವರದಿ
ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಶಾಲಾ-ಕಾಲೇಜು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿತ್ತು. ಇದೀಗ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ.

ತಾವು ಓದಿದ್ದ ಕೆರಾಡಿ ಕನ್ನಡ ಶಾಲೆ ದತ್ತು ಪಡೆದ ನಟ ರಿಷಬ್ ಶೆಟ್ಟಿ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ನಿಜಜೀವನದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.

