school

ಮೇ 31 ರಿಂದ ಶಾಲೆಗಳು ಪ್ರಾರಂಭ; ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಸ್ವಾಗತ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಮೇ 31ರಿಂದ ರಾಜ್ಯದ 23-24 ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಾರಂಭವಾಗುತ್ತಿದ್ದು, ಮೊದಲ ದಿನ ಶಾಲೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಮೇ 31ಕ್ಕೆ ಶಾಲೆಗಳ ಆರಂಭ: ಸರ್ಕಾರದಿಂದ ಮಾರ್ಗಸೂಚಿ, ಮೊದಲ ದಿನ ಸಿಹಿ ನೀಡಿ ಮಕ್ಕಳ ಸ್ವಾಗತ
ಬೇಸಿಗೆ ರಜೆ ಕಳೆದು ನೂತನ ಶೈಕ್ಷಣಿಕ ವರ್ಷ ಮೇ 31ರಂದು ಬುಧವಾರ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಶಾಲೆ ಆರಂಭವಾದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡವಂತೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳಿಗೆ ಸರ್ಕಾರ ಸೂಚನೆ ನೀಡಿದೆ.

ಅಸ್ಸಾಂ ಶಾಲಾ ಶಿಕ್ಷಕರಿಗೆ ಹೊಸ ಡ್ರೆಸ್ ಕೋಡ್: ಟೀ ಶರ್ಟ್, ಲೆಗ್ಗಿಂಗ್ಸ್, ಜೀನ್ಸ್ ಧರಿಸದಂತೆ ಸೂಚನೆ!
ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಶಿಕ್ಷಕರಿಗೆ ಅಸ್ಸಾಂ ಸರ್ಕಾರ ವಸ್ತ್ರಸಂಹಿತೆ ಜಾರಿಗೊಳಿಸಿದೆ.

ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ದಿನಗಳಲ್ಲಿ ಭಾರೀ ಕಡಿತ
ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಕುರಿತು, ಪ್ರಮುಖ ದಿನಾಂಕಗಳ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ.

ಕೋಟಿಗಟ್ಟಲೆ ಖರ್ಚು ಮಾಡಿ ದೊಡ್ಡ ಯೋಜನೆ ನೀಡುವ ಸರ್ಕಾರಕ್ಕೆ ಶಾಲಾ ಮಕ್ಕಳಿಗೆ ಹಾಲು ಪೂರೈಸಲು ಆಗದೇ: ಆಹಾರ ನಮ್ಮ ಹಕ್ಕು ಸದಸ್ಯರಿಂದ ಪತ್ರ
ಹಾಲಿನ ಅಭಾವದ ವರದಿಗಳ ನಡುವೆ, ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿಗಳಲ್ಲಿ ಹಾಲು ಸರಬರಾಜು ಮತ್ತೆ ಆರಂಭಿಸಬೇಕೆಂದು ಒತ್ತಾಯಿಸಿ ನಾಗರಿಕ ಹಕ್ಕುಗಳ ಸಂಘಟನೆಯ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಶಾಲಾ ಮಕ್ಕಳಿಗೆ ನೀಡಿರುವ ಶೈಕ್ಷಣಿಕ ಕಿಟ್‌ಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ: ಕಾಂಗ್ರೆಸ್ ಆರೋಪ
ರಾಜ್ಯದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ 2021-22 ಹಾಗೂ 2022-23ನೇ ಸಾಲಿನಲ್ಲಿ ಕಟ್ಟಡ ಕಾರ್ಮಿಕರಿಗೆ ನೀಡಿರುವ ವಿವಿಧ ಟೂಲ್ ಕಿಟ್ ಹಾಗೂ ಶಾಲಾ ಮಕ್ಕಳಿಗೆ ನೀಡಿರುವ ಶೈಕ್ಷಣಿಕ ಕಿಟ್‌ಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ.

ಬೆಂಗಳೂರು: ಶಾಲೆ-ಕಾಲೇಜು ದೋಚುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ!
ಶಾಲಾ-ಕಾಲೇಜುಗಳನ್ನು ಗುರಿಯಾಗಿಸಿಕೊಂಡು ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಮೂವರು ಅಂತರ್ ರಾಜ್ಯ ಕಳ್ಳರನ್ನು ಜ್ಞಾನಭಾರತಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ರಾಜ್ಯ ಪಠ್ಯಕ್ರಮಕ್ಕೆ ಅನುಮತಿ ಪಡೆದು ಸಿಬಿಎಸ್ಇ ಬೋಧನೆ: ಧೋನಿ ಶಾಲೆ ಸೇರಿ 500ಕ್ಕೂ ಹೆಚ್ಚು ಶಾಲೆಗಳಿಗೆ ನೋಟಿಸ್ ಜಾರಿ
ರಾಜ್ಯದ ಪಠ್ಯಕ್ರಮಕ್ಕೆ ಅನುಮತಿ ಪಡೆದು ಸಿಬಿಎಸ್ಇ/ಐಪಿಎಸ್ಇ ಪಠ್ಯಕ್ರಮ ಬೋಧನೆ ಸೇರಿದಂತೆ ನಿಯಮಗಳನ್ನು ಉಲ್ಲಂಘಿಸಿರುವ ಧೋನಿ ಗ್ಲೋಬರ್ ಶಾಲೆ ಸೇರಿದಂತೆ ನಗರದ 500ಕ್ಕೂ ಹೆಚ್ಚು ಶಾಲೆಗಳಿಗೆ ಶಿಕ್ಷಣ ಇಲಾಖೆ ನೋಟಿಸ್ ಜಾರಿ ಮಾಡಿದೆ.

ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಹೆಚ್ಚಳ; ಮಳೆ ನೀರು ಕೊಯ್ಲು ಕಾರಣ!
ಎನ್‌ಜಿಒವೊಂದರ ವಿಶಿಷ್ಟ ಉಪಕ್ರಮವೊಂದು ರಾಜ್ಯದ ವಿವಿಧ ಜಿಲ್ಲೆಗಳ 15 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿನಿಯರ ಹಾಜರಾತಿ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ.

