ರಾಜ್ಯಶುಲ್ಕ ಕಟ್ಟುವಂತೆ ಪೋಷಕರ ಮೇಲೆ ಒತ್ತಡ ಹಾಕಿದರೆ ಕ್ರಮ: ಸುರೇಶ್ ಕುಮಾರ್
ಲಾಕ್ಡೌನ್ ಸಂದರ್ಭದಲ್ಲಿ ಶುಲ್ಕ ಕಟ್ಟಲು ಸಾಧ್ಯವಾಗದ ಪೋಷಕರ ಮೇಲೆ ಒತ್ತಡ ಹೇರುವುದರ ಕುರಿತು ದೂರುಗಳು ಬಂದಲ್ಲಿ ಅಂತಹ ಶಾಲೆಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮಕ್ಕೆ ಮುಂದಾಗಲು ಆಯುಕ್ತರಿಗೆ ನಿರ್ದೇಶನವನ್ನು ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ