schools

ಇನ್ನೆರಡು ತಿಂಗಳು ಶಾಲೆಗಳ ಆರಂಭಿಸುವುದು ಸೂಕ್ತವಲ್ಲ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ
ಮಾರಕ ಕೊರೋನಾ ವೈರಸ್ ತಾರಕಕ್ಕೇರಿರುವ ಈ ಹೊತ್ತಿನಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಾಲೆಗಳ ಪುನಾರಂಭಕ್ಕೆ ಕಸರತ್ತು; ವರದಿ ನೀಡುವಂತೆ ಸೂಚನೆ
ಶಾಲೆಗಳ ಪುನಾರಂಭ ಮಾಡುವ ಬಗ್ಗೆ ಸಚಿವ ಸುರೇಶ್ ಕುಮಾರ್ ಚಿಂತನೆ ನಡೆಸಿದ್ದು, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗದರ್ಶಿ ಸೂತ್ರ ಪ್ರಕಾರ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪುನಾರಂಭ ಮಾಡುವ ಕುರಿತು ವರದಿ ನೀಡಲು ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಿದ್ದಾರೆ.

ಶಾಲೆ ಪುನಾರಂಭ: ಎಸ್ ಡಿ ಎಂಸಿ, ಪೋಷಕರ ಜೊತೆ ಚರ್ಚಿಸಿ ತೀರ್ಮಾನ- ಸುರೇಶ್ ಕುಮಾರ್
ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಪುನರಾರಂಭಿಸುವ ಸಾಧಕ– ಬಾಧಕಗಳ ಕುರಿತು ಪೋಷಕರು ಮತ್ತು ಸಂಬಂಧಿಸಿದ ಪಾಲುದಾರರ ಸಭೆಗಳನ್ನು ಪ್ರತಿ ಶಾಲೆಯ ಮಟ್ಟದಲ್ಲಿ ಆಯೋಜಿಸಿ ಅಭಿಪ್ರಾಯ ಪಡೆಯಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಕೊರೋನಾ ಕೇಸ್ ಶೂನ್ಯ ಆಗುವವರೆಗೂ ಮಕ್ಕಳನ್ನು ಶಾಲೆಗೆ ಕಳುಹಿಸಲ್ಲ: ಪೋಷಕರು
ಜುಲೈ 1ರಿಂದ ಶಾಲೆಗಳನ್ನು ಪುನಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಆದರೆ ನರದ ಪೋಷಕರ ಸಂಘ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ವಿರೋಧ ವ್ಯಕ್ತ ಪಡಿಸಿದೆ.

ಕೊರೋನಾ ವೈರಸ್ ಪರಿಣಾಮ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟದ ಬದಲಿಗೆ ಅಕ್ಕಿ ಮತ್ತು ಬೇಳೆ ವಿತರಣೆ
ಕೊರೋನಾ ವೈರಸ್ ತಡೆಗೆ ಲಾಕ್ ಡೌನ್ ಘೋಷಣೆ ಮಾಡಿರುವುದು ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ನೀಡಲಾಗುತ್ತಿದ್ದ ಮಧ್ಯಾಹ್ನದ ಬಿಸಿಯೂಟದ ಮೇಲೂ ಪರಿಣಾಮ ಬೀರಿದೆ. ಆದರೆ ರಾಜ್ಯ ಸರ್ಕಾರ ಇದರಿಂದ ಮಕ್ಕಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸಿದೆ.

ಮುಂದಿನ ವರ್ಷಕ್ಕೆ ದಾಖಲಾತಿ, ಶುಲ್ಕ ಪಾವತಿಗೆ ಸೂಚಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸುರೇಶ್ ಕುಮಾರ್
ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ದೇಶದಲ್ಲಿ ಆರೋಗ್ಯ ತುರ್ತುಪರಿಸ್ಥಿತಿಯ ವಾತಾವರಣವಿದ್ದು, ಇಂತಹ ಸಂದರ್ಭದಲ್ಲಿ ಯಾವುದೇ ಶಾಲೆಯಲ್ಲಿ ದಾಖಲಾತಿ ಪ್ರಕ್ರಿಯೆ ಮತ್ತು ಶುಲ್ಕ ವಸೂಲಾತಿಯನ್ನು ತಕ್ಷಣ ನಿಲ್ಲಿಸಬೇಕು.

ಕಲಬುರಗಿ: ಕರೋನಾಗೆ ಮೊದಲ ಬಲಿ; 1ರಿಂದ 10ನೇ ತರಗತಿ ನಡೆಸದಂತೆ ಡಿಡಿಪಿಐ ಸೂಚನೆ
ಕರೊನಾ ಸೋಂಕಿಗೆ ಕಲಬುರಗಿ ವೃದ್ಧ ಬಲಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ.

ಸರ್ಕಾರದ ಆದೇಶ ಪಾಲಿಸದ ಶಾಲೆಗಳ ವಿರುದ್ಧ ಕಠಿಣ ಕ್ರಮ; ಸಚಿವ ಸುರೇಶ್ ಕುಮಾರ್ ಎಚ್ಚರಿಕೆ
ಸರ್ಕಾರದ ಆದೇಶ ಪಾಲಿಸುವುದು ಎಲ್ಲ ಶಾಲೆಗಳ ಕರ್ತವ್ಯ, ಸರ್ಕಾರದ ಈ ಆದೇಶ ಪಾಲಿಸದಿರುವ ಶಾಲೆಗಳು ಅದೆಷ್ಟೇ ಪ್ರಭಾವಶಾಲಿಯಾಗಿದ್ದರೂ ಅವುಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ದೆಹಲಿ ಹಿಂಸಾಚಾರ: 167 ಎಫ್ ಐಆರ್ ದಾಖಲು, ಮಾರ್ಚ್ 7ರವರೆಗೆ ಶಾಲಾ ಕಾಲೇಜು ಬಂದ್
ಈಶಾನ್ಯ ದೆಹಲಿಯ ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಸದ್ಯ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದ್ದು ಜನರು ದಿನನಿತ್ಯದ ವ್ಯವಹಾರಕ್ಕೆ ಮನೆಯಿಂದ ಹೊರಗೆ ಬರುತ್ತಿದ್ದಾರೆ. ಜನರ ಅಗತ್ಯ ಬಳಕೆಯ ವಸ್ತುಗಳ ಅಂಗಡಿಗಳು ನಿನ್ನೆಯಿಂದ ತೆರೆದಿವೆ.

