schools

ಶಾಲೆಗಳ ನಿರ್ಮಾಣಕ್ಕೆ ಸರ್ಕಾರದ ಬಳಿ ಭೂಮಿ ಇಲ್ಲದಂತಾಗುತ್ತಿದೆ: ಸಚಿವ ಆರ್.ಅಶೋಕ್
ಕರ್ನಾಟಕದಲ್ಲಿ ಸರ್ಕಾರಿ ಭೂಮಿ ಖಾಲಿಯಾಗುತ್ತಿದ್ದು, ಮುಂದಿನ 10-12 ವರ್ಷಗಳಲ್ಲಿ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಮತ್ತು ಇತರ ಮೂಲಸೌಕರ್ಯಗಳನ್ನು ನಿರ್ಮಿಸಲು ಭೂಮಿಯನ್ನು ಹುಡುಕುವುದು ಕಷ್ಟವಾಗಬಹುದು ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದ್ದಾರೆ.

ಒಂದಿಷ್ಟು ಜನಕ್ಕೆ ಬಣ್ಣದ ಅಲರ್ಜಿ ಇದೆ: ಶಾಲೆಗಳ ಗೋಡೆಗಳಿಗೆ ಕೇಸರಿ ಬಣ್ಣ ಹಚ್ಚಿಯೇ ತೀರುತ್ತೇನೆ: ಸಚಿವ ನಾಗೇಶ್
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ 8000 ಶಾಲಾ ಕೊಠಡಿಗಳಿಗೆ ವಿವೇಕ ಎಂದು ಹೆಸರಿಡಲಾಗುತ್ತಿದೆ.

'ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ' ಎಂದು ಮುಂದಿನ ವರ್ಷ ದೊಡ್ಡ ಮಟ್ಟದಲ್ಲಿ ಆಚರಿಸಲು ಸರ್ಕಾರ ಯೋಜನೆ
ಕರ್ನಾಟಕ ರಾಜ್ಯ ಸಿರಿಧಾನ್ಯಗಳ ಬೆಳೆಗಳಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ. ವಿಶ್ವಸಂಸ್ಥೆಯು ಗೊತ್ತುಪಡಿಸಿದ 2023 ನೇ ವರ್ಷವನ್ನು 'ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ' ಎಂದು ಆಚರಿಸುವ ಪ್ರಯತ್ನದ ಭಾಗವಾಗಿ, ಜನರಲ್ಲಿ ಅದರ ಬಳಕೆಯನ್ನು ಹೆಚ್ಚಿಸುವ ಮೂಲಕ ಬೆಳೆಯನ್ನು ಉತ್ತೇಜಿಸಲು ಸರ್ಕಾರ ಯೋಜಿಸುತ್ತಿದೆ.

ಧ್ಯಾನದಿಂದ ಮಕ್ಕಳು ಕುಗ್ಗಿ ಹೋಗುತ್ತಾರೆ ಎನ್ನುವುದೇ ಹಾಸ್ಯಾಸ್ಪದ; ಸಿದ್ದು ಟ್ವೀಟ್ಗೆ ಸಚಿವ ನಾಗೇಶ್ ತಿರುಗೇಟು
ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಧ್ಯಾನವನ್ನೂ "ರಾಜಕೀಯ ಅಜೆಂಡಾ, ಗಿಮಿಕ್" ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ...

ನಿಯಮ ಪಾಲಿಸದ ಅರೇಬಿಕ್ ಶಾಲೆಗಳ ವಿರುದ್ಧ ಸಮೀಕ್ಷೆ ನಡೆಸಲು ನಿರ್ಧಾರ: ಸಚಿವ ಬಿ.ಸಿ.ನಾಗೇಶ್
ರಾಜ್ಯದಲ್ಲಿನ ಹಲವು ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮವನ್ನು ಪಾಲಿಸದೆ ಇರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಆ ಶಾಲೆಗಳ ವಿರುದ್ದ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ,ಸಿ.ನಾಗೇಶ್ ಅವರು ಹೇಳಿದ್ದಾರೆ.

ಹವಾಮಾನ ಬದಲಾವಣೆ, ಪರಿಣಾಮ, ಸವಾಲುಗಳೇನು?: ಕೇರಳದ ಶಾಲೆಗಳಲ್ಲಿ ಹವಾಮಾನ ಕೇಂದ್ರಗಳ ಸ್ಥಾಪನೆ
ಹವಾಮಾನ ಬದಲಾವಣೆಯು ಮನುಷ್ಯ ಸೇರಿದಂತೆ ಭೂಮಿ ಮೇಲಿರುವ ಎಲ್ಲಾ ಜೀವಿಗಳ ಮೇಲೆ ಪರಿಣಾಮ ಬೀರುತ್ತದೆ. ಭವಿಷ್ಯದಲ್ಲಿ ದೊಡ್ಡ ಸವಾಲಿನ ವಿಚಾರವಾಗಿದೆ. ಈ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲು ಕೇರಳ ಶಾಲೆಗಳಲ್ಲಿ ಹವಾಮಾನ ಕೇಂದ್ರಗಳನ್ನು ಸ್ಥಾಪಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕೇರಳ ರಾಜ್ಯದಲ್ಲಿ ದೇಶದಲ್ಲಿ ಪ್ರಥಮ ಬಾರಿಗೆ ಈ ವಿನೂತನ ಯೋಜನೆ ಜಾರಿಗೆ ಬರುತ್ತಿದೆ.

ಮಕ್ಕಳಲ್ಲಿ ಜ್ವರ ಪ್ರಕರಣ ಹೆಚ್ಚಳ: ಪುದುಚೇರಿ ಶಾಲೆಗಳಿಗೆ ರಜೆ ಘೋಷಣೆ
ಮಕ್ಕಳಲ್ಲಿ ಜ್ವರ ತರಹದ ಕಾಯಿಲೆ ಹೆಚ್ಚಿದ ಹಿನ್ನೆಲೆಯಲ್ಲಿ ಶನಿವಾರದಿಂದ ಸೆಪ್ಟೆಂಬರ್ 25 ರವರೆಗೆ ಒಂದರಿಂದ 7ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮುಚ್ಚುವುದಾಗಿ ಪುದುಚೇರಿ ಸರ್ಕಾರ ಶುಕ್ರವಾರ ಘೋಷಿಸಿದೆ.

ಬೆಂಗಳೂರಿನಲ್ಲಿ ಮುಂದುವರೆದ ಮಳೆ ಆರ್ಭಟ: ಪೂರ್ವ ಭಾಗದ ಶಾಲೆಗಳಿಗೆ ರಜೆ ಘೋಷಣೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಂಗಳವಾರವೂ ಮಳೆ ಆರ್ಭಟ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೀಗಾಗಿ ಬೆಂಗಳೂರು ಪೂರ್ವ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿ...

ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಇಲ್ಲ; ಶಾಲೆಗಳನ್ನು ಮುಚ್ಚುವ ಗಂಭೀರ ಸ್ಥಿತಿ ಸದ್ಯಕ್ಕೆ ಇಲ್ಲ: ಸಿಎಂ ನೇತೃತ್ವದ ಸಂಪುಟ ಸಭೆ ತೀರ್ಮಾನ
ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಕುರಿತು ಜನರು ಆತಂಕಗೊಳ್ಳುವ ಅವಶ್ಯಕತೆ ಇಲ್ಲ. ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸದ್ಯಕ್ಕೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವುದಿಲ್ಲ. ವಾರದ ಬಳಿಕ ಈ ಕುರಿತು ಪರಿಸ್ಥಿತಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

