ವಾಣಿಜ್ಯಅತಿದೊಡ್ಡ ಖಾಸಗೀಕರಣ: ಬಿಪಿಸಿಎಲ್, ಎಸ್ ಸಿಐ,ಕಾನ್ಕೋರ್ ನಲ್ಲಿನ ಷೇರು ಮಾರಾಟಕ್ಕೆ ಕೇಂದ್ರ ಸಂಪುಟ ಒಪ್ಪಿಗೆ
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್ ) ಮತ್ತು ಶಿಪ್ಪಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಸ್ ಸಿಐ) ಹಾಗೂ ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ತಾನು ಹೊಂದಿರುವ ಎಲ್ಲಾ ಷೇರುಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.