Sealdown

ಕೆ.ಆರ್. ಮಾರ್ಕೆಟ್, ಕಲಾಸಿಪಾಳ್ಯ 14 ದಿನಗಳ ಕಾಲ ಸಂಪೂರ್ಣ ಬಂದ್: ಬಿಬಿಎಂಪಿ ಆದೇಶ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆ ಸದಾ ಜನ ದಟ್ಟಣೆ ಹಾಗೂ ವ್ಯಾಪಾರ- ವಹಿವಾಟಿನಿಂದ ಕೂಡಿರುತ್ತಿದ್ದ ಕಲಾಸಿಪಾಳ್ಯ ಮತ್ತು ಕೆಆರ್ ಮಾರ್ಕೆಟ್ ನ್ನು 14 ದಿನಗಳ ಕಾಲ ಬಂದ್ ಮಾಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ಆದೇಶ ಹೊರಡಿಸಿದೆ.

ಹಾಸನದಲ್ಲಿ 12 ಮಂದಿಗೆ ಕೊರೋನಾ: ಸೋಂಕಿತರ ಸಂಖ್ಯೆ 136ಕ್ಕೆ ಏರಿಕೆ, 7 ಪ್ರದೇಶಗಳು ಸೀಲ್'ಡೌನ್
ಜಿಲ್ಲೆಯಲ್ಲಿ ಕೊರೋನಾ ಹೆಮ್ಮಾರಿಯ ಅಬ್ಬರ ಮುಂದುವರೆದಿದ್ದು, ಬುಧವಾರ ಮತ್ತೆ 1 ವರ್ಷದ ಮಗು ಸೇರಿ 12 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 136ಕ್ಕೆ ಏರಿಕೆಯಾಗಿದೆ.

ಉಡುಪಿ- ಕಾರ್ಕಳದಲ್ಲಿ ಇಬ್ಬರು ಪೊಲೀಸರಿಗೆ ಕೊರೊನಾ ಸೋಂಕು: 3 ಠಾಣೆ ಸೀಲ್‌ಡೌನ್
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಹಾಗೂ ಅಜೆಕಾರು ಪೊಲೀಸ್ ಠಾಣೆಯ ಎಎಸ್‌ಐಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ಹಾಗೂ ಮೂರು ಪೊಲೀಸ್ ಠಾಣೆಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ಉದ್ಯೋಗಿಯೊಬ್ಬರಿಗೆ ಕೊರೋನಾ ದೃಢ: ಏರ್ ಇಂಡಿಯಾ ಪ್ರಧಾನ ಕಚೇರಿ ಸೀಲ್ ಡೌನ್
ಉದ್ಯೋಗಿಯೊಬ್ಬರಲ್ಲಿ ಮಹಾಮಾರಿ ಕೊರೋನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರಿ ಸ್ವಾಮ್ಯದ ವಿಮಾನ ಸಂಸ್ಥೆ ಏರ್ ಇಂಡಿಯಾ ಕಾರ್ಯಾಲಯವನ್ನು ಸೀಲ್ಡೌನ್ ಮಾಡಲಾಗಿದೆ.

ಕೊರೋನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ; ಸತ್ತ ನಂತರ ಸೋಂಕು ದೃಢ
ಕೊರೋನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಎಚ್‌ಬಿಆರ್ ಬಡಾವಣೆಯ 57 ವರ್ಷದ ಮಹಿಳೆಯೊಬ್ಬರು ಕಲ್ಯಾಣನಗರದ ‘ನಾರ್ತ್ ಬೆಂಗಳೂರು ನರ್ಸಿಂಗ್ ಹೋಂ’ನಲ್ಲಿ ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾರೆ.

