ರಾಜ್ಯದ್ವಿತೀಯ ಪಿ.ಯು.ಪರೀಕ್ಷೆ, ಪೂರ್ವ ಸಿದ್ಧತೆ ಕುರಿತು ಕ್ರಮ ಕೈಗೊಳ್ಳಲು ಸಚಿವ ಸುರೇಶ್ ಕುಮಾರ್ ಸೂಚನೆ
ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗೆ ಕೂಡಲೇ ಪೂರ್ವಭಾವಿ ಕ್ರಮಗಳನ್ನು ಕೈಗೊಂಡು ಅತ್ಯಂತ ಜಾಗರೂಕತೆಯಿಂದ ಪರೀಕ್ಷಾ ಪ್ರಕ್ರಿಯೆ ನಡೆಸಬೇಕು ಹಾಗೂ ಉನ್ನತ ಮೌಲ್ಯಮಾಪನಾ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.