ರಾಜ್ಯಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಡಿಸಿಎಂ ಹುದ್ದೆ ನೀಡಿ: ಮಠಾಧೀಶರ ಒತ್ತಾಯ
ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಮತದಾರರು 135 ಸ್ಥಾನಗಳನ್ನು ನೀಡಿ, ಬಹುಮತದ ಸರಕಾರ ರಚನೆಗೆ ಹಾದಿ ಸುಗಮಗೊಳಿಸಿದ್ದಾರೆ. ಗಮನಾರ್ಹ ಅಂಶವೆಂದರೆ, ರಾಜ್ಯದಲ್ಲಿ ವೀರಶೈವ–ಲಿಂಗಾಯತ ಸಮುದಾಯದ ಮತದಾರರು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪರ ಮತ ಚಲಾಯಿಸಿದ ಕಾರಣಕ್ಕಾಗಿ 34 ಲಿಂಗಾಯತ ಶಾಸಕರು ಆಯ್ಕೆಗೊಂಡಿದ್ದಾರೆ.