ರಾಜ್ಯಪರಿಷತ್ತಿನಲ್ಲಿ ಪಾಸಾಗದ ಎಪಿಎಂಸಿ ತಿದ್ದುಪಡಿ ವಿಧೇಯಕ: ಮತ ವಿಭಜನೆಯಲ್ಲಿ ಸರ್ಕಾರಕ್ಕೆ ಸೋಲು, ಪರಿಶೀಲನೆಗೆ ಸದನ ಸಮಿತಿ ರಚನೆ
ವಿಧಾನಸಭೆಯಲ್ಲಿ ಅಂಗೀಕೃತವಾದ ‘ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕ 2023’ ಅನ್ನು ಮೇಲ್ಮನೆಯಲ್ಲಿ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮತದಾನದ ಮೂಲಕ ಶಾಸನ ಪರಿಶೀಲನಾ ಸಮಿತಿಗೆ ಒಪ್ಪಿಸಲು ನಿರ್ಧರಿಸಲಾಯಿತು. ಇದರಿಂದಾಗಿ, ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾದಂತಾಗಿದೆ.