sentences

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿಗೆ 20 ವರ್ಷ ಜೈಲು; ಬಾಲ್ಯವಿವಾಹ ಮಾಡಿಸಿದ ಪೋಷಕರು-ಪತಿಗೂ ಶಿಕ್ಷೆ..!
2024ರ ಸೆಪ್ಟೆಂಬರ್ 5ರಂದು ನಾಗಪ್ಪ ಚಡಬನೂರ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಹಣ ತಂದುಕೊಂಡು ಬರುತ್ತೇನೆ ಎಂದು ಹೇಳಿ ವಾಡಿ ರೈಲು ನಿಲ್ದಾಣದಲ್ಲಿ ಬಾಲಕಿಯನ್ನು ಬಿಟ್ಟು ತೆರಳಿದ್ದಾನೆ ಎನ್ನಲಾಗಿದೆ.

ಸಿಂಡಿಕೇಟ್ ಬ್ಯಾಂಕ್ ವಂಚನೆ ಪ್ರಕರಣ: ಇಬ್ಬರು ಮಾಜಿ ಮ್ಯಾನೇಜರ್ ಸೇರಿ ಮೂವರಿಗೆ ಜೈಲು ಶಿಕ್ಷೆ!
ಆರೋಪಿಗಳಾದ ಹೆಚ್.ಎಂ. ಸ್ವಾಮಿಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು ರೂ. 1.5 ಲಕ್ಷ ದಂಡ, ವಿಠಲ್ ದಾಸ್ ಗೆ 1 ವರ್ಷ ಜೈಲು ಶಿಕ್ಷೆ ಮತ್ತು ರೂ. 50,000 ದಂಡ ಹಾಗೂ ಅಸಾದುಲ್ಲಾ ಖಾನ್ ಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು ರೂ. 50 ಲಕ್ಷ ದಂಡ ವಿಧಿಸಲಾಗಿದೆ.

ದಲಿತರ ಮೇಲೆ ದೌರ್ಜನ್ಯ ಪ್ರಕರಣ: 10 ಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ
ತುಮಕೂರು ಜಿಲ್ಲೆಯ ದುಂಡ ಗ್ರಾಮದಲ್ಲಿ ದಶಕದ ಹಿಂದೆ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದ್ದ ಹೈಕೋರ್ಟ್, ಶುಕ್ರವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

ಮೈಸೂರು ಬಾಂಬ್ ಸ್ಫೋಟ ಪ್ರಕರಣ: ಮೂವರು ಉಗ್ರರಿಗೆ ಜೈಲು ಶಿಕ್ಷೆ!
2016ರಲ್ಲಿ ಮೈಸೂರು ಜಿಲ್ಲಾ ನ್ಯಾಯಾಲಯ ಆವರಣದ ಶೌಚಾಲಯದಲ್ಲಿ ಬಾಂಬ್ ಸ್ಫೋಟಿಸಿದ ಪ್ರಕರಣದಲ್ಲಿ ಅಪರಾಧಿಗಳಾಗಿ ತೀರ್ಮಾನಿಸಲ್ಪಟಿರುವ ತಮಿಳುನಾಡು ಮೂಲದ ಇಬ್ಬರು ಉಗ್ರರಿಗೆ ದಂಡ ಸಹಿತ 10 ವರ್ಷ ಜೈಲು ಶಿಕ್ಷೆ ಹಾಗೂ ಮತ್ತೊಬ್ಬ ಉಗ್ರನಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಮಲಾಲ ಮೇಲೆ ದಾಳಿ ಮಾಡಿದ್ದ ಉಗ್ರರಿಗೆ ಜೀವಾವಧಿ ಶಿಕ್ಷೆ
೨೦೧೪ರ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ, ೧೭ ವರ್ಷದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಪಾಕಿಸ್ತಾನಿ ಬಾಲಕಿ ಮಲಾಲ ಯೂಸಫ್ ಝಾಯಿ ಮೇಲೆ....

