ರಾಜ್ಯಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನ ವಿಚಾರ ಮತ್ತೆ ಮುನ್ನೆಲೆಗೆ; ಲಿಂಗಾಯತ ಮಹಾಸಭಾ ಒತ್ತಾಯ
ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿ ಸುಮಾರು ಆರು ವರ್ಷಗಳ ನಂತರ ಜಾಗತಿಕ ಲಿಂಗಾಯತ ಮಹಾಸಭಾ ಮತ್ತೊಮ್ಮೆ ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ಒತ್ತಾಯಿಸಲು ನಿರ್ಧರಿಸಿದೆ ಎಂದು ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್ಎಂ ಜಾಮದಾರ್ ಭಾನುವಾರ ಹೇಳಿದ್ದಾರೆ.