ದೇಶಪ್ರತ್ಯೇಕತಾವಾದಿ ತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿದ ಕೇಂದ್ರ ಸರ್ಕಾರ
ಭಯೋತ್ಪಾದನೆಯನ್ನು ಉತ್ತೇಜಿಸುವ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ದೇಶ ವಿರೋಧಿ ಪ್ರಚಾರ ನಡೆಸುತ್ತಿರುವ ಪಾಕಿಸ್ತಾನ ಪರ ಪ್ರತ್ಯೇಕತಾವಾದಿ ತೆಹ್ರೀಕ್-ಎ-ಹುರಿಯತ್ (TeH) ಜಮ್ಮು ಮತ್ತು ಕಾಶ್ಮೀರವನ್ನು ನಿಷೇಧಿತ ಸಂಘಟನೆ ಎಂದು ಕೇಂದ್ರ ಸರ್ಕಾರ ಭಾನುವಾರ ಘೋಷಿಸಿದೆ.