Serum Institute of India

ಜೂನ್‌ನಲ್ಲಿ 10 ಕೋಟಿ ಕೋವಿಶೀಲ್ಡ್ ಡೋಸ್ ಉತ್ಪಾದಿಸಿ ಪೂರೈಸುತ್ತೇವೆ: ಕೇಂದ್ರಕ್ಕೆ ಸೀರಮ್ ಇನ್‌ಸ್ಟಿಟ್ಯೂಟ್ ಪತ್ರ
ಜೂನ್‌ನಲ್ಲಿ ಒಂಬತ್ತರಿಂದ 10 ಕೋಟಿ ಕೋವಿಶೀಲ್ಡ್ ಡೋಸ್ ಗಳನ್ನು ಉತ್ಪಾದನೆ ಮಾಡಲು ಮತ್ತು ಪೂರೈಸಲು ಸಾಧ್ಯವಾಗಲಿದೆ ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸರ್ಕಾರಕ್ಕೆ ಮಾಹಿತಿ ನೀಡಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

ಬ್ರಿಟನ್ ಗೆ ರಫ್ತಾಗಬೇಕಿದ್ದ 50 ಲಕ್ಷ ಡೋಸ್ ಕೋವಿಡ್ ಲಸಿಕೆ ಭಾರತದಲ್ಲೇ ಬಳಕೆಗೆ ಅನುಮತಿ!
ಬ್ರಿಟನ್ ಗೆ ರಫ್ತಾಗಬೇಕಿದ್ದ 50 ಲಕ್ಷ ಡೋಸ್ ಕೋವಿಡ್ ಲಸಿಕೆಯನ್ನು ಭಾರತದಲ್ಲೇ ಬಳಕೆ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದ್ದು, ಇದರಿಂದ ಭಾರತ ಸರ್ಕಾರದ 18 ವರ್ಷಕ್ಕೂ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಯೋಜನೆಗೆ ಬೆಂಬಲ ಲಭಿಸಿದಂತಾಗಿದೆ.

ಬ್ರಿಟನ್‌ನಲ್ಲಿ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿರುವ ಸೀರಮ್ ಇನ್ಸ್ಟಿಟ್ಯೂಟ್ ಸಿಇಒ ಆದಾರ್ ಪೂನವಾಲಾ
ಬ್ರಿಟನ್‌ನಲ್ಲಿ ಲಸಿಕೆ ಉತ್ಪಾದನೆ, ಪ್ರಯೋಗ ಸೇರಿದಂತೆ ವಿವಿಧ ಚಟುವಟಿಕೆಗಳಿಗಾಗಿ ಭಾರತದ ಪುಣೆಯಲ್ಲಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ.

'ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ರಾತ್ರೋರಾತ್ರಿ ಲಸಿಕೆ ಉತ್ಪಾದನೆ ದ್ವಿಗುಣಗೊಳಿಸಲು ಸಾಧ್ಯವಿಲ್ಲ': ಆದಾರ್ ಪೂನಾವಾಲ
ಕೋವಿಡ್ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸುವಂತೆ ನಿರಂತರವಾಗಿ ಕೇಳಿಬರುತ್ತಿರುವ ಒತ್ತಡಗಳಿಗೆ ತಿರುಗೇಟು ನೀಡಿರುವ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಸಿಇಒ ಆದಾರ್ ಪೂನಾವಾಲ ಅವರು, ರಾತ್ರೋ-ರಾತ್ರಿ ಲಸಿಕೆ ಉತ್ಪಾದನೆಯನ್ನು ದ್ವಿಗುಣ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

11 ಕೋಟಿ ಕೋವಿಶೀಲ್ಡ್ ಲಸಿಕೆಗಾಗಿ ಕೇಂದ್ರದಿಂದ 1,732 ಕೋಟಿ ರೂ. ನಮಗೆ ತಲುಪಿದೆ: ಸೀರಮ್ ಕಂಪನಿ
ಮೇ, ಜೂನ್ ಮತ್ತು ಜುಲೈನಲ್ಲಿ ಕೋವಿಶೀಲ್ಡ್ ಲಸಿಕೆಯ 11 ಕೋಟಿ ಡೋಸ್‌ಗಳಿಗೆ ಏಪ್ರಿಲ್ 28ರಂದು ಕಂಪನಿಗೆ 1,732.50 ಕೋಟಿ ರೂಪಾಯಿಯನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ ಎಂಬ ಸರ್ಕಾರದ ಹೇಳಿಕೆಯನ್ನು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ಸೋಮವಾರ ಅನುಮೋದಿಸಿದೆ.

ಕೋವಿಡ್ ಲಸಿಕೆಗಳನ್ನು ಖರೀದಿಸಲಿಲ್ಲ ಎಂಬ ಆರೋಪವನ್ನು ತಳ್ಳಿಹಾಕಿದ ಕೇಂದ್ರ
ಮೇ, ಜೂನ್ ಮತ್ತು ಜುಲೈ ತಿಂಗಳಲ್ಲಿ 11 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆಗಾಗಿ 1732.50 ಕೋಟಿ ರೂಪಾಯಿಗಳನ್ನು ಮುಂಗಡವಾಗಿ ಏಪ್ರಿಲ್ 28ರಂದೇ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಬೆದರಿಕೆ ಹಾಕುತ್ತಿರುವವರ ಹೆಸರು ಬಹಿರಂಗ ಪಡಿಸಿ: ಆದಾರ್ ಪೂನಾವಾಲಗೆ ಕಾಂಗ್ರೆಸ್ ಒತ್ತಾಯ
ಲಸಿಕೆ ವಿಚಾರವಾಗಿ ಬೆದರಿಕೆ ಹಾಕುತ್ತಿರುವವರ ಹೆಸರು ಬಹಿರಂಗಗೊಳಿಸಿ ಎಂದು ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆದಾರ್ ಪೂನಾವಾಲಗೆ ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

18 ವರ್ಷ ಮೇಲ್ಪಟ್ಟವರಿಗೂ ಲಸಿಕೆ; 'ಅತೀ ದೊಡ್ಡ ಜವಾಬ್ದಾರಿ ನನ್ನ ಮೇಲಿದೆ': ಆಧಾರ್ ಪೂನಾವಾಲ
18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಘೋಷಣೆ ಮಾಡಿದ್ದು ಎಲ್ಲ ಜವಾಬ್ದಾರಿ ನನ್ನ ಮೇಲಿದೆ ಎಂದು ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಆಧಾರ್ ಪೂನಾವಾಲ ಹೇಳಿದ್ದಾರೆ.

ಲಸಿಕೆ ಉತ್ಪಾದನೆ ಹೆಚ್ಚಳಕ್ಕೆ ಕ್ರಮ: ಉತ್ಪಾದಕರಿಗೆ ಕೇಂದ್ರದಿಂದ 4,500 ಕೋಟಿ ರೂಪಾಯಿ ಆರ್ಥಿಕ ನೆರವು
ಕೊರೋನಾ ಲಸಿಕೆಯನ್ನು ಮೇ.1 ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ನೀಡುವುದಕ್ಕಾಗಿ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದ್ದು, ಲಸಿಕೆ ತಯಾರಿಕೆ ಹೆಚ್ಚಳಕ್ಕೆ ಕ್ರಮ ಕೈಗೊಂಡಿದೆ.

