sexual harassment case

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪೊಲೀಸರು ಸಮನ್ಸ್ ನೀಡಿದ್ರೆ ನಿರ್ಲಕ್ಷಿಸಿ: ತಮ್ಮ ಸಿಬ್ಬಂದಿಗೆ ಪಶ್ಚಿಮ ಬಂಗಾಳ ರಾಜ್ಯಪಾಲ ಸೂಚನೆ
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ್ ಬೋಸ್ ಅವರು, ಪ್ರಕರಣ ಸಂಬಂಧ ಪೊಲೀಸರು ಸಮನ್ಸ್ ನೀಡಿದರೆ ಅದನ್ನು ನಿರ್ಲಕ್ಷಿಸುವಂತೆ ರಾಜಭವನ ಸಿಬ್ಬಂದಿಗೆ ಸೂಚನೆ.

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣ: ಎಸ್‌ಐಟಿ ಮೊರೆ ಹೋದ ಇನ್ನೂ ಮೂವರು ಸಂತ್ರಸ್ತರು
ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ದೇಶದಿಂದ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗಾಗಿ ಎಸ್‌ಐಟಿ ವಿದೇಶದಲ್ಲಿ ಹುಡುಕಾಟವನ್ನು ತೀವ್ರಗೊಳಿಸಿದ್ದು, ಪ್ರಕರಣದ ಇನ್ನೂ ಮೂವರು ಸಂತ್ರಸ್ತೆಯರು ಎಸ್‌ಐಟಿಯನ್ನು ಸಂಪರ್ಕಿಸಿದ್ದಾರೆ ಎಂದು ಮೂಲಗಳು ಭಾನುವಾರ ತಿಳಿಸಿವೆ.

ಎಚ್‌ಡಿ ಕುಮಾರಸ್ವಾಮಿ, ರೇವಣ್ಣ ಕುಟುಂಬಗಳ ವೈಷಮ್ಯದಿಂದ ಲೈಂಗಿಕ ಹಗರಣ ಹೊರಬಿದ್ದಿದೆ: ಡಿಕೆ ಶಿವಕುಮಾರ್
ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮತ್ತು ಅವರ ಸಹೋದರ ಹಾಗೂ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರ ಕುಟುಂಬಗಳ ನಡುವಿನ ವೈಷಮ್ಯದಿಂದಾಗಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣ ಪ್ರಕರಣ ಬಹಿರಂಗವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಮೊಮ್ಮಗನನ್ನು ರಕ್ಷಿಸಲು ಕಾನೂನು ತಜ್ಞರ ಮೊರೆ ಹೋದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ!
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗಿದ್ದು, ಇದೇ ವೇಳೆ ಭಾರಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿ ದೇಶದಿಂದ ಪರಾರಿಯಾಗಿರುವ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಪ್ರಬಲ ರಕ್ಷಣೆ ನೀಡಲು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು.

ಪ್ರಜ್ವಲ್ ರೇವಣ್ಣ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ; ಪ್ರಧಾನಿ ಮೋದಿ, ಎಚ್‌ಡಿ ದೇವೇಗೌಡರು ಪ್ರತಿಕ್ರಿಯೆ ನೀಡಲಿ: ಡಿಕೆ ಸುರೇಶ್
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಪ್ರತಿಕ್ರಿಯಿಸುವಂತೆ ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಗುರುವಾರ ಒತ್ತಾಯಿಸಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣ: ಐವರು ಸಂತ್ರಸ್ತರಿಂದ ಮಾಹಿತಿ ಪಡೆದ ಎಸ್‌ಐಟಿ, ಶೀಘ್ರದಲ್ಲೇ ಎಚ್‌ಡಿ ರೇವಣ್ಣಗೆ ಸಮನ್ಸ್
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್ಐಟಿ, ತಂದೆ-ಮಗನಿಂದ ಕಿರುಕುಳಕ್ಕೊಳಗಾದ ಐವರು ಮಹಿಳೆಯರಿಂದ ಮಾಹಿತಿ ಕಲೆಹಾಕಿದೆ. ಈಮಧ್ಯೆ, ಎಸ್‌ಐಟಿ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಯಿದೆ.

ಮಾಜಿ WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ಧದ ಆರೋಪ ರೂಪಿಸುವ ಆದೇಶ ಮುಂದೂಡಿದ ದೆಹಲಿ ಕೋರ್ಟ್!
ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ಮಾಜಿ ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಆರೋಪಗಳನ್ನು ರೂಪಿಸುವ ಆದೇಶವನ್ನು ದೆಹಲಿ ನ್ಯಾಯಾಲಯವು ಮುಂದೂಡಿದೆ.

Metro train ಮಹಿಳಾ ಭದ್ರತಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: BMRCL ಹಿರಿಯ ಅಧಿಕಾರಿ ವಿರುದ್ಧ FIR
ಬೆಂಗಳೂರು ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದ್ದು, ಈ ಬಾರಿ ಮಹಿಳಾ ಭದ್ರತಾ ಸಿಬ್ಬಂದಿಯೇ ತಮ್ಮ ಹಿರಿಯ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಎಫ್ ಐಆರ್ ದಾಖಲಿಸಿದ್ದಾರೆ.

ನಮ್ಮ ಮೆಟ್ರೋ ಅಧಿಕಾರಿಯಿಂದ ಮಹಿಳಾ ಸೆಕ್ಯೂರಿಟಿಗಳಿಗೆ ಲೈಂಗಿಕ ಕಿರುಕುಳ ಆರೋಪ; ಎಫ್ಐಆರ್ ದಾಖಲು
ಬೆಂಗಳೂರಿನ ನಮ್ಮ ಮೆಟ್ರೋ ನಿಲ್ಲಾಣದ ಅಧಿಕಾರಿಯೊಬ್ಬರ ವಿರುದ್ಧ ಮಹಿಳಾ ಸೆಕ್ಯೂರಿಟಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

