sexual harassment case

ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ನಿಂದ ಲೈಂಗಿಕ ಶೋಷಣೆ, ಕಿರುಕುಳ ಆಗಿದೆ: ಚಾರ್ಜ್ ಶೀಟ್ ನಲ್ಲಿ ದೆಹಲಿ ಪೊಲೀಸರಿಂದ ಉಲ್ಲೇಖ
ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ, ದೆಹಲಿ ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಕ್ರೀಡಾಪಟುಗಳಿಗೆ ಕಿರುಕುಳ, ಲೈಂಗಿಕ ಕಿರುಕುಳ ನೀಡಿದ್ದು, ಈ ಕೃತ್ಯವನ್ನು ಶಿಕ್ಷಾರ್ಹ ಎಂದು ದೆಹಲಿ ಪೊಲೀಸರು ಪರಿಗಣಿಸಿದ್ದಾರೆ.

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ಸಂಸದ, ಶಾಸಕರ ನ್ಯಾಯಾಲಯಕ್ಕೆ ವರ್ಗಾವಣೆ
ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರು ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ದೆಹಲಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್(ಸಿಎಂಎಂ)...

ಅಪ್ರಾಪ್ತೆ ಆರೋಪಕ್ಕೆ ಪುರಾವೆ ಇಲ್ಲ; ಬ್ರಿಜ್ ಭೂಷಣ್ ವಿರುದ್ಧದ ಪ್ರಕರಣ ರದ್ದತಿಗೆ ದೆಹಲಿ ಪೊಲೀಸ್ ಕೋರಿಕೆ
ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ ನಿರ್ಗಮಿತ (WFI) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಅಪ್ರಾಪ್ತ ಕುಸ್ತಿಪಟು ಬಾಲಕಿ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ದೆಹಲಿ ಪೊಲೀಸರು ಗುರುವಾರ ಇಲ್ಲಿನ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.

ಲೈಂಗಿಕ ದೌರ್ಜನ್ಯ: ಯುವ ಕಾಂಗ್ರೆಸ್ ಮುಖ್ಯಸ್ಥ ಬಿವಿ ಶ್ರೀನಿವಾಸ್‌ಗೆ ಸುಪ್ರೀಂನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು
ಉಚ್ಛಾಟಿತ ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಗಿತಾ ದತ್ತಾ ಅವರ ಲೈಂಗಿಕ ಕಿರುಕುಳದ ದೂರಿನ ಮೇಲೆ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಲೈಂಗಿಕ ಕಿರುಕುಳ ಪ್ರಕರಣ: ಶ್ರೀಗಳಿಗೆ ತನಿಖಾಧಿಕಾರಿಗಳಿಂದ ಹತ್ತಾರು ಪ್ರಶ್ನೆಗಳು; ಶರಣರಿಗೆ ಪುರುಷತ್ವ ಪರೀಕ್ಷೆ!
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಸ್ವಾಮೀಜಿಗಳಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಮುರುಘಾ ಶ್ರೀ
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಬಂಧನ ಭೀತಿ ಎದುರಿಸುತ್ತಿದ್ದು, ಸೋಮವಾರ ನಿರೀಕ್ಷಣಾ ಜಾಮೀನು ಕೋರಿ...

ನನ್ನ ವಿರುದ್ಧ ಪಿತೂರಿ, ಯಾವುದೇ ಪಲಾಯನವಾದ ಇಲ್ಲ, ತನಿಖೆಗೆ ಸಂಪೂರ್ಣ ಸಹಕಾರ: ಮುರುಘಾ ಶ್ರೀ
ನನ್ನ ವಿರುದ್ಧ ಮುರುಘಾ ಮಠದ ಒಳಗಡೆ ನಡೆಯುತ್ತಿದ್ದ ಪಿತೂರಿ ಇದೀಗ ಹೊರಗಡೆ ನಡೆಯುತ್ತಿದೆ ಎಂದು ಮರಾಧೀಶ ಡಾ. ಶಿವಮೂರ್ತಿ ಶರಣರು ಸೋಮವಾರ ಹೇಳಿದರು.

ಮುರುಘಾ ಶರಣರ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣದಲ್ಲಿ ಯಾರಿಂದಲೂ ಒತ್ತಡವಿಲ್ಲ ಎಂದ ಎಡಿಜಿಪಿ ಅಲೋಕ್ ಕುಮಾರ್
ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪೊಕ್ಸೊ ಪ್ರಕರಣದ ಅಡಿಯಲ್ಲಿ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಿಂದಲೂ ಒತ್ತಡ ಬಂದಿಲ್ಲ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ಲೈಂಗಿಕ ಕಿರುಕುಳ: 6 ತಿಂಗಳಲ್ಲಿ ತರುಣ್ ತೇಜ್‌ಪಾಲ್ ವಿರುದ್ಧ ವಿಚಾರಣೆ ಮುಗಿಸಿ-ಗೋವಾ ಕೋರ್ಟ್ ಗೆ ಸುಪ್ರೀಂ ನಿರ್ದೇಶನ
ಮಹಿಳಾ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ತನ್ನ ವಿರುದ್ಧದ ಆರೋಪಗಳನ್ನು ರದ್ದುಪಡಿಸುವಂತೆ ತೆಹಲ್ಕಾ ನಿಯತಕಾಲಿಕೆಯ ಸಂಸ್ಥಾಪಕ ತರುಣ್ ತೇಜ್‌ಪಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

