ರಾಜ್ಯವಿದೇಶದಿಂದ ಪ್ರಜ್ವಲ್ ರೇವಣ್ಣನನ್ನು ವಾಪಸ್ ಕರೆಸಿಕೊಳ್ಳುತ್ತೇವೆ, ವಿಡಿಯೋ ಪರೀಕ್ಷೆಗೆ FSLಗೆ ರವಾನೆ: ಡಾ ಪರಮೇಶ್ವರ್
ಹೆಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ದೂರು ದಾಖಲಾಗಿದ್ದು, ದೂರುದಾರರು ಯಾರ ಹೆಸರು ಉಲ್ಲೇಖಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಂತ್ರಸ್ತರಿಗೆ ಭಯ ಹುಟ್ಟಿಸಿದರೆ ಅವರಿಗೆ ನಾವು ಸರ್ಕಾರ ವತಿಯಿಂದ ಭದ್ರತೆ ನೀಡುತ್ತೇವೆ ಎಂದು ಡಾ ಜಿ ಪರಮೇಶ್ವರ್ ಹೇಳಿದರು.