Shakti scheme

ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿ: ನಳಿನ್ ಕುಮಾರ್ ಕಟೀಲ್
ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಗೊಂದಲ ಸೃಷ್ಟಿ ಮಾಡುವುದೇ ಬಿಜೆಪಿಯವರ ಕೆಲಸ, ವಿದ್ಯುತ್ ದರ ಹೆಚ್ಚಿಸಿದ್ದು ನಾವಲ್ಲ, ಏಪ್ರಿಲ್ ನಲ್ಲೇ ತೀರ್ಮಾನ ಆಗಿತ್ತು: ಸಿಎಂ ಸಿದ್ದರಾಮಯ್ಯ
ಇಂದು(ಜೂನ್ 11) ರಾಜ್ಯಾದ್ಯಂತ ಶಕ್ತಿ ಯೋಜನೆ ಜಾರಿಯಾಗಿದೆ. 41.85 ಲಕ್ಷ ಮಹಿಳೆಯರು ಸರ್ಕಾರಿ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಅಂತಾರಾಜ್ಯ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. ಮಂಗಳಮುಖಿಯರು ಸಹ ಉಚಿತವಾಗಿ ಪ್ರಯಾಣ ಮಾಡಬಹುದು. ಮಹಿಳೆಯರಿಗೆ ಶಕ್ತಿ ತುಂಬಲು ‘ಶಕ್ತಿ ಯೋಜನೆ’ ಎಂಬ ಹೆಸರು ಇಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಹಿಳೆಯರ ಸುಲಭ-ಸುರಕ್ಷತೆ ಪ್ರಯಾಣವೇ ನಮ್ಮ ಆದ್ಯತೆ, ಕೊರತೆ ಇರುವ ಕಡೆ ಬಸ್ಸುಗಳ ಸಂಖ್ಯೆ ಹೆಚ್ಚಳ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಇಂದು ಭಾನುವಾರ ಜೂನ್ 11ರಂದು ಮಧ್ಯಾಹ್ನ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧ ಮುಂದೆ ಸರ್ಕಾರದ 'ಶಕ್ತಿ ಯೋಜನೆ'ಗೆ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಾದ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಉಚಿತವಾಗಿ ಬಸ್ ಪ್ರಯಾಣ ಮಾಡಲು ನಮಗೂ 'ಶಕ್ತಿ ಯೋಜನೆ' ನೀಡಿ; ಕಾಸರಗೋಡಿನ ಕನ್ನಡತಿಯರು
ಗಡಿನಾಡ ಕನ್ನಡಿಗರು (ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ರಾಜ್ಯದ ಹೊರಗೆ ವಾಸಿಸುವ ಕನ್ನಡಿಗರು) ‘ಶಕ್ತಿ’ ಉಚಿತ ಬಸ್ ಪ್ರಯಾಣ ಯೋಜನೆಯ ಲಾಭವನ್ನು ಕೇರಳದ ಗಡಿ ಜಿಲ್ಲೆ ಕಾಸರಗೋಡಿನ ಕನ್ನಡಿಗ ಮಹಿಳೆಯರಿಗೆ ವಿಸ್ತರಿಸಬೇಕೆಂದು ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಶಕ್ತಿ ಯೋಜನೆ: ಜೂನ್ 11ರಂದು ಕೆಲಹೊತ್ತು ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಭಾರೀ ಸದ್ದು ಮಾಡುತ್ತಿವೆ. ಕಾಂಗ್ರೆಸ್ ಚುನಾವಣಾ ಪೂರ್ವ ನೀಡಿದ್ದ 5 ಖಾತರಿಗಳಲ್ಲಿ 3 ಖಾತರಿಗಳನ್ನು ಜಾರಿಗೆ ತರುವ ದಿನಾಂಕಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿನ್ನೆ ಅಧಿಕೃತವಾಗಿ ಘೋಷಿಸಿದ್ದಾರೆ.

ಸರ್ಕಾರದ ಶಕ್ತಿ ಯೋಜನೆ ಜೂನ್ 11ಕ್ಕೆ, ಗೃಹಜ್ಯೋತಿ ಆಗಸ್ಟ್ 1, ಗೃಹ ಲಕ್ಷ್ಮಿ ಆಗಸ್ಟ್ 17 ಅಥವಾ 18ರಂದು ಜಾರಿ: ಸಿಎಂ ಸಿದ್ದರಾಮಯ್ಯ
ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಐದು ಖಾತರಿ ಯೋಜನೆಗಳಲ್ಲಿ ಮೂರನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಅದರಂತೆ ಜೂನ್ 11 ರಂದು ಬೆಂಗಳೂರಿನಲ್ಲಿ ಶಕ್ತಿ ಯೋಜನೆ, ಆಗಸ್ಟ್ 1 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಮತ್ತು ಆಗಸ್ಟ್ 17 ಅಥವಾ 18 ರಂದು ಬೆಳಗಾವಿಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ.

