ರಾಜ್ಯರಾಯಚೂರಿನಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ಒಪ್ಪಿಗೆ; ಉದ್ಯೋಗ ಸೃಷ್ಟಿಸುವ ನಿರೀಕ್ಷೆ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ
ಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಯಚೂರು ಜಿಲ್ಲೆಗೆ ಜವಳಿ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ಅವರು ಸೋಮವಾರ ಹೇಳಿದರು.