Sharad Pawar

ಎನ್ ಸಿಪಿ ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್ ನೇಮಕ: ಶರದ್ ಪವಾರ್ ಅಧಿಕೃತ ಘೋಷಣೆ
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ ಮತ್ತು ಪ್ರಫುಲ್ ಪಟೇಲ್ ಅವರನ್ನು ನೇಮಿಸಿ ಎನ್ ಸಿ ಪಿ ಹಿರಿಯ ಮುಖಂಡ ಶರದ್ ಪವಾರ್ ಆದೇಶ ಹೊರಡಿಸಿದ್ದಾರೆ.

ಶರದ್ ಪವಾರ್ ಗೆ ಜೀವ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಮಹಾ ಸಿಎಂ
ಎನ್ ಸಿಪಿ ವರಿಷ್ಠ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶುಕ್ರವಾರ ಹೇಳಿದ್ದಾರೆ.

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್‌ಗೆ ಜೀವ ಬೆದರಿಕೆ; ಮುಂಬೈ ಪೊಲೀಸ್ ಮುಖ್ಯಸ್ಥರನ್ನು ಭೇಟಿ ಮಾಡಿದ ಪುತ್ರಿ ಸುಪ್ರಿಯಾ ಸುಳೆ
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಎನ್‌ಸಿಪಿ ಶುಕ್ರವಾರ ಹೇಳಿಕೊಂಡಿದೆ.

ಒಡಿಶಾ ತ್ರಿವಳಿ ರೈಲು ದುರಂತ: ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ರಾಜೀನಾಮೆಗೆ ಶರದ್ ಪವಾರ್ ಒತ್ತಾಯ
ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗ ನಿಲ್ದಾಣ ಬಳಿ ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವ ಸ್ಥಾನಕ್ಕೆ ಅಶ್ವಿನ್ ವೈಷ್ಣವ್ ರಾಜೀನಾಮೆ ನೀಡಬೇಕೆಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ಒತ್ತಾಯಿಸಿದ್ದಾರೆ.

ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ನೋಡಿದ ಮೇಲೆ ನಾನು ಹೋಗದೇ ಇದ್ದುದ್ದಕ್ಕೆ ಸಂತೋಷ ಪಡುತ್ತೇನೆ: ಶರದ್ ಪವಾರ್
ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗದೇ ಇದ್ದುದ್ದಕ್ಕೆ ಸಂತೋಷವಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ನಾವು ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದ್ದೇವೆಯೇ?: ಶರದ್ ಪವಾರ್
ಹೊಸ ಸಂಸತ್ ಭವನ ಉದ್ಘಾಟನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ತಾವು ಅಲ್ಲಿಗೆ ಹೋಗುವುದಿಲ್ಲ ಎಂದು ಭಾನುವಾರ ಹೇಳಿದ್ದಾರೆ.

ಮುಂಬೈ: ಉದ್ಧವ್ ಠಾಕ್ರೆ ಬಳಿಕ ಶರದ್ ಪವಾರ್ ಭೇಟಿಯಾದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುರುವಾರ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿಯಾದರು.

ಪ್ರಧಾನಿ ರೇಸ್‌ನಲ್ಲಿಲ್ಲ, ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದೇನೆ: ಶರದ್ ಪವಾರ್
ನಾನು ಪ್ರಧಾನಿ ಹುದ್ದೆಯ ರೇಸ್ ನಲ್ಲಿ ಇಲ್ಲ. ಪ್ರತಿಪಕ್ಷಗಳು ದೇಶದ ಒಳಿತಿಗಾಗಿ ಕೆಲಸ ಮಾಡುವ ನಾಯಕತ್ವವನ್ನು ಬಯಸುತ್ತವೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಹೇಳಿದ್ದಾರೆ.

ಕರ್ನಾಟಕದಂತೆ ಮಹಾರಾಷ್ಟ್ರದಲ್ಲೂ ಬಿಜೆಪಿಯನ್ನು ತಿರಸ್ಕರಿಸಿ: ಶರದ್ ಪವಾರ್
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆಗೆ ಸಂಬಂಧಿಸಿದಂತೆ ಏಕನಾಥ್ ಶಿಂಧೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಅಧ್ಯಕ್ಷ ಶರದ್ ಪವಾರ್, ಕೋಮು ವಿಭಜನೆಯನ್ನು ಉದ್ದೇಶಪೂರ್ವಕವಾಗಿ...

