ರಾಜಕೀಯಅಶ್ಲೀಲ ವಿಡಿಯೋ ಕೇಸ್: ಪ್ರಜ್ವಲ್ ರೇವಣ್ಣ ಅಮಾನತಿಗೆ ಜೆಡಿಎಸ್ ಶಾಸಕ ಕಂದಕೂರು ಆಗ್ರಹ!
ಹಾಸನದ ಹಾಲಿ ಸಂಸದ, ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರದ್ದು ಎಂದು ಆರೋಪಿಸಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರಾದ್ಯಂತ ಸದ್ದು ಮಾಡುತ್ತಿದ್ದು, ಈ ನಡುವೆ ಪ್ರಜ್ವಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್ ಶಾಸಕರೊಬ್ಬರು ಒತ್ತಾಯ ಮಾಡಿದ್ದಾರೆ.