ದೇಶವಿವಿಐಪಿ ಚಾಪರ್ ಹಗರಣ: ಮಾಜಿ ಸಿಎಜಿ ಶಶಿಕಾಂತ್ ಶರ್ಮಾ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ ಸಿಬಿಐ
ಅಗಸ್ಟಾವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ರಕ್ಷಣಾ ಕಾರ್ಯದರ್ಶಿ ಮತ್ತು ಮಾಜಿ ಲೆಕ್ಕಪರಿಶೋಧಕ ನಿಯಂತ್ರಕ(ಸಿಎಜಿ) ಶಶಿಕಾಂತ್ ಶರ್ಮಾ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸಿಬಿಐ ಮನವಿ ಮಾಡಿದೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.