ರಾಜ್ಯಉಪಚುನಾವಣೆ ಸಮರ: ಶಿಗ್ಗಾಂವಿಯಿಂದ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಬಂಗಾರು ಹನುಮಂತುಗೆ BJP ಟಿಕೆಟ್
ವಿಧಾನಸಭೆ ಚುನಾವಣೆಯಲ್ಲಿ ಶಿಗ್ಗಾಂವಿನಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದ ಬಸವರಾಜ ಬೊಮ್ಮಯಿ ಅವರು ಹಾವೇರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು. ಇನ್ನು ಸಂಡೂರಿನ ಕಾಂಗ್ರೆಸ್ ಶಾಸಕ ತುಕಾರಾಮ್ ಸಹ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿಯಿಂದ ಗೆದ್ದು ಸಂಸದರಾಗಿದ್ದರು.