Shiggaon

ಶಿಗ್ಗಾಂವಿ-ಸವಣೂರು ಅಭಿವೃದ್ಧಿಗೆ ಬದ್ಧ: ಸಿಎಂ ಬೊಮ್ಮಾಯಿ
ಶಿಗ್ಗಾಂವಿ-ಸವಣೂರು ಭಾಗದ ಅಭಿವೃದ್ಧಿಗೆ ಬದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದು, ತಮ್ಮ ಅಧಿಕಾರಾವಧಿಯಲ್ಲಿ ಕ್ಷೇತ್ರದಲ್ಲಿ ಕೈಗೊಂಡ ಹಲವಾರು ಯೋಜನೆಗಳನ್ನು ಮುಖ್ಯಮಂತ್ರಿಗಳು ಪಟ್ಟಿ ಮಾಡಿದರು.

ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ವಿರುದ್ಧದ ಅಭ್ಯರ್ಥಿ ಬದಲಾಯಿಸಿದ ಕಾಂಗ್ರೆಸ್
ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧದ ತನ್ನ ಅಭ್ಯರ್ಥಿಯನ್ನು ಕಾಂಗ್ರೆಸ್ ಬುಧವಾರ ಬದಲಾವಣೆ ಮಾಡಿದೆ.

ಶಿಗ್ಗಾಂವಿಯಲ್ಲಿ ಬೊಮ್ಮಾಯಿ ನಾಮಪತ್ರ ಸಲ್ಲಿಕೆ; ಜೆಪಿ ನಡ್ಡಾ, ನಟ ಸುದೀಪ್ ಭಾಗಿ: ಬಿಜೆಪಿಗೆ 125ಕ್ಕೂ ಹೆಚ್ಚು ಸ್ಥಾನ ಎಂದ ಸಿಎಂ
ಸತತ 15 ವರ್ಷ ನೀವು ನನಗೆ ಆಶೀರ್ವಾದ ಮಾಡಿದ್ದೀರಿ. ನಮ್ಮ ನಿಮ್ಮ ನಡುವೆ ಬೇರೆ ಯಾವುದೇ ಶಕ್ತಿ ಬರಲು ಸಾಧ್ಯವಿಲ್ಲ. ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದರು.

ಶಿಗ್ಗಾಂವಿಯಲ್ಲಿ ಬಿಜೆಪಿ ಸಮಾವೇಶ: ಸಿಎಂ ಬೊಮ್ಮಾಯಿ, ಜೆಪಿ ನಡ್ಡಾ, ನಟ ಸುದೀಪ್ ಭಾಗಿ
ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾ ನಾಮಪತ್ರ ಸಲ್ಲಿಸಿದರು.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಶೆಟ್ರು: ಶಿಗ್ಗಾಂವಿಯಿಂದ ಸಿಎಂ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರು?
ಕಾಂಗ್ರೆಸ್ ತನ್ನ 15 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಕಾಂಗ್ರೆಸ್‌ಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ವಿಧಾನಸಭಾ ಚುನಾವಣೆ: ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಶನಿವಾರ ನಾಮಪತ್ರ ಸಲ್ಲಿಸಿದರು.

ಯಾರು ಬೇಕಾದ್ರೂ ಬನ್ನಿ, ಹೋರಾಡಲು ನಾನು ಸಿದ್ಧ; ಶಿಗ್ಗಾಂವಿಯಲ್ಲಿ ಕಾಂಗ್ರೆಸ್'ಗೆ ಸಿಎಂ ಬೊಮ್ಮಾಯಿ ಸವಾಲ್
ಯಾರು ಬೇಕಾದರೂ ಬನ್ನಿ, ಶಿಗ್ಗಾಂವಿಯಲ್ಲಿ ಹೋರಾಡಲು ಸಿದ್ಧ ಎಂದು ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಸವಾಲು ಹಾಕಿದ್ದಾರೆ.

ಶಿಗ್ಗಾವಿಯಲ್ಲಿ ಸಿಎಂ ಸೋಲಿಸಲು ಕಾಂಗ್ರೆಸ್ ಪ್ಲಾನ್: ಬೊಮ್ಮಾಯಿ ರಕ್ಷಣೆಗೆ ದಳಪತಿಗಳು ಮುಂದು; ಸ್ಪರ್ಧೆ ಕಠಿಣವಾದರೆ ದಾವಣಗೆರೆಗೆ ಶಿಫ್ಟ್?
ಮೇ 10 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ತವರು ಜಿಲ್ಲೆ ಹಾವೇರಿಯ ಶಿಗ್ಗಾವಿಯಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ನಾನು ಸತ್ತ ಮೇಲೆ ನನ್ನ ಹೆಣವನ್ನು ಇದೇ ಮಣ್ಣಿನಲ್ಲಿ ಹೂಳಬೇಕು, ನನ್ನ ಮತ್ತು ಶಿಗ್ಗಾವಿ ಜನರ ಕರುಳಬಳ್ಳಿ ಸಂಬಂಧ ಈ ಉಸಿರು ಇರುವವರೆಗೂ ಇರುತ್ತದೆ: ಸಿಎಂ ಬೊಮ್ಮಾಯಿ ಬಾವುಕ ನುಡಿ
ನನ್ನ ಮತ್ತು ಶಿಗ್ಗಾವಿ ಕ್ಷೇತ್ರದ ಜನರ ಕರುಳಬಳ್ಳಿ ಸಂಬಂಧ ಮುಗಿಯಲ್ಲ.. ನಾನು ಸತ್ತ ಮೇಲೂ ನನ್ನನ್ನು ಇಲ್ಲೇ ಮಣ್ಣು ಮಾಡಬೇಕು, ಇದು ನಾನು ಮಾಡಿಕೊಂಡಿರುವ ನಿರ್ಧಾರ ಎಂದು ತವರು ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾವುಕವಾಗಿ ನುಡಿದ ಪ್ರಸಂಗ ನಡೆದಿದೆ.

