Shivajinagar

ಬೆಂಗಳೂರು: ಶಿವಾಜಿನಗರದಲ್ಲಿ ಕಟ್ಟಡ ಮೇಲಿಂದ ಕುಸಿದು ಬಿದ್ದ ನೀರಿನ ಟ್ಯಾಂಕ್; ಮೃತರ ಸಂಖ್ಯೆ 3ಕ್ಕೆ ಏರಿಕೆ
ಶಿವಾಜಿನಗರ ಜನನಿಬಿಡ ಪ್ರದೇಶದಲ್ಲಿ ಫುಡ್ ಸ್ಟಾಲ್ ಮೇಲೆ ಕಳೆದ ತಡರಾತ್ರಿ ನೀರಿನ ಟ್ಯಾಂಕ್ ಕುಸಿದುಬಿದ್ದು ಮೂವರು ಮೃತಪಟ್ಟಿದ್ದಾರೆ. ದುರ್ಘಟನೆ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಾಜಿನಗರದ ಮಸೀದಿಗೆ ಹುಸಿ ಬಾಂಬ್ ಕರೆ; ಮಹಾರಾಷ್ಟ್ರ ಮೂಲದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು
ಬೆಂಗಳೂರು ನಗರದ ಕೋಮು ಸೂಕ್ಷ್ಮ ಪ್ರದೇಶವಾದ ಶಿವಾಜಿನಗರದಲ್ಲಿರುವ ಮಸೀದಿಯೊಂದಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ದುಷ್ಕರ್ಮಿಯನ್ನು ಬಂಧಿಸಿರುವುದಾಗಿ ಸೋಮವಾರ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಕೋಮು ಸೂಕ್ಷ್ಮ ಪ್ರದೇಶದ ಮಸೀದಿಗೆ ಹುಸಿ ಬಾಂಬ್ ಕರೆ; ದುಷ್ಕರ್ಮಿ ಪತ್ತೆಗೆ ಶೋಧ ಕಾರ್ಯ
ಬೆಂಗಳೂರು ನಗರದ ಕೋಮು ಸೂಕ್ಷ್ಮ ಪ್ರದೇಶವಾದ ಶಿವಾಜಿನಗರದಲ್ಲಿರುವ ಮಸೀದಿಯೊಂದಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ದುಷ್ಕರ್ಮಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಶಿವಾಜಿನಗರದ 'ಗೂಂಡಾರಾಜ್' ಇಮೇಜ್ ಬದಲಿಸುವುದೇ ನನ್ನ ಪ್ರಮುಖ ಉದ್ದೇಶ: ರಿಜ್ವಾನ್ ಅರ್ಷದ್
ಬಿಜೆಪಿ ಭದ್ರಕೋಟೆಯಾಗಿರುವ ಸಂಪಂಗಿರಾಮನಗರದ ಎರಡು ಬೂತ್‌ಗಳಲ್ಲಿ ಶಿವಾಜಿನಗರ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು. ಶಿವಾಜಿನಗರದ ಇಮೇಜ್ ಬದಲಾವಣೆಯೇ ನನ್ನ ಮೊದಲ ಆದ್ಯತೆ ಎಂದು ದೇವಾಂಗ ಸಮುದಾಯದವರಿಗೆ ಭರವಸೆ ನೀಡಿದರು.

ಶಿವಾಜಿನಗರ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಫರ್ ಅಲಿ ನಾಮಪತ್ರ ತಿರಸ್ಕೃತ
ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಫರ್ ಅಲಿ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಜೆಡಿಎಸ್ಗೆ ಆರಂಭದಲ್ಲೇ ಆಘಾತ ಎದುರಾಗಿದೆ.

ಶಿವಾಜಿನಗರ ಹಬ್ಬ: ಮಿರಿಮಿರಿ ಮಿಂಚಿದ ಚಾಂದಿನಿ ಚೌಕ್, ಝಗಮಗಿಸಿದ ಸಂಭ್ರಮ
ರಾಜಧಾನಿ ಬೆಂಗಳೂರಿನ ಹೃದಯಭಾಗದಲ್ಲಿ ಜನ ಮೂಗು ಮುಚ್ಚಿ ಓಡಾಡಬೇಕಾದ ಸ್ಥಿತಿಯಲ್ಲಿದ್ದ ಶಿವಾಜಿನಗರಕ್ಕೆ ಹೊಸ ರೂಪ ನೀಡಲಾಗಿದ್ದು, ಚಾಂದಿನಿ ಚೌಕ್ ನಲ್ಲಿ ಶನಿವಾರ ಅದ್ದೂರಿ ಯಾಗಿ ಹಬ್ಬ ಆಚರಣೆ ಮಾಡಲಾಯಿತು.

ಶಿವಾಜಿನಗರಕ್ಕೆ ಹೊಸ ರೂಪ; ಚಾಂದಿನಿ ಚೌಕ್‌ಗೆ ಸ್ಮಾರ್ಟ್ ಲುಕ್, ರಸೆಲ್ ಮಾರುಕಟ್ಟೆ ಚಿತ್ರಣವೇ ಬದಲು
ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಶಿವಾಜಿನಗರಕ್ಕೆ ಹೊಸ ರೂಪ ನೀಡಲಾಗಿದ್ದು, ಸಾಕಷ್ಟು ಬದಲಾವಣೆಗಳನ್ನು ತರಲಾಗಿದೆ. ಕಸ ಸುರಿಯುವ ತಾಣವಾಗಿದ್ದ ಚಾಂದಿನಿ ಚೌಕ್ ಇದೀಗ ಜನ ಸಮುದಾಯ ಸೇರುವ ತಾಣವಾಗಿ ಮಾರ್ಪಟ್ಟಿದೆ.

ಶಿವಾಜಿನಗರ ಕ್ಷೇತ್ರದಲ್ಲಿ ಯಾವುದೇ ಮತದಾರರ ಹೆಸರು ಕೈಬಿಟ್ಟಿಲ್ಲ: ಬಿಬಿಎಂಪಿ
ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಯಾವುದೇ ಹೆಸರುಗಳನ್ನು ಕೈಬಿಟ್ಟಿಲ್ಲ ಎಂದು ಬಿಬಿಎಂಪಿ ಗುರುವಾರ ಸ್ಪಷ್ಟಪಡಿಸಿದೆ.

ಶಿವಾಜಿನಗರಕ್ಕೆ ಸ್ಮಾರ್ಟ್ ಲುಕ್: ಜನವರಿ 15ಕ್ಕೆ ಸಂಕ್ರಾಂತಿಯಂದು ಉದ್ಘಾಟನೆಗೆ ಚಿಂತನೆ!
ಸ್ಮಾರ್ಟ್ ಸಿಟಿ ಬೆಂಗಳೂರು ಲಿಮಿಟೆಡ್ ಅಡಿಯಲ್ಲಿ ಶಿವಾಜಿನಗರದ ಪ್ರಮುಖ ಪ್ರದೇಶಗಳಿಗೆ ಹೊಸ ರೂಪ ನೀಡಲು ಮುಂದಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈಗಾಗಲೇ ಶೇ.70 ರಷ್ಟು ಕಾಮಗಾರಿ ಪೂರ್ಣಗೊಳಿಸಿದೆ.

