ರಾಜಕೀಯಶಿವಮೊಗ್ಗ ಲೋಕಸಭಾ ಕ್ಷೇತ್ರ: ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ
ರಾಜ್ಯ ಬಿಜೆಪಿ ಬಿ ಎಸ್ ಯಡಿಯೂರಪ್ಪ ಕುಟುಂಬದ ಮುಷ್ಠಿಯಲ್ಲಿದೆ ಎಂದು ಆರೋಪಿಸಿ ಮತ್ತು ತಮ್ಮ ಪುತ್ರ ಕೆ ಇ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗಲಿಲ್ಲವೆಂದು ಮುನಿಸಿಕೊಂಡು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಇಂದು ಶುಕ್ರವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.