ರಾಜ್ಯರಾಜ್ಯದಲ್ಲಿ ಹಿಂದೂಗಳು ಬದುಕುವ ಹಾಗಿಲ್ಲವೇ, ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ‘ಜಾತ್ಯಾತೀತ’ ಸಿದ್ದರಾಮಯ್ಯ ಉತ್ತರಿಸುವಿರಾ?: ಬಿಜೆಪಿ ಪ್ರಶ್ನೆ
ಕೋಮು ಸೂಕ್ಷ್ಮ ಜಿಲ್ಲೆಯಾದ ಶಿವಮೊಗ್ಗ ಮತ್ತೊಮ್ಮೆ ಹಿಂದೂ ಮುಸ್ಲಿಂ ಸಮುದಾಯಗಳ ನಡುವೆ ಗದ್ದಲಕ್ಕೆ ಕಾರಣವಾಗಿದ್ದು, ಇಷ್ಟು ದಿನ ತಣ್ಣಗಿದ್ದ ಶಿವಮೊಗ್ಗ ಮತ್ತೆ ರಣರಂಗವಾಗಿದೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ.