Shivamogga

ಶಿವಮೊಗ್ಗ: ನದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ವ್ಯಕ್ತಿಯ ರಕ್ಷಿಸಿದ ಪೊಲೀಸರು!
ಸೋಮವಾರ ಬೆಳಗ್ಗೆ ಶಿವಮೊಗ್ಗದ ತೀರ್ಥಹಳ್ಳಿ ಪೊಲೀಸ್ ವ್ಯಾಪ್ತಿಯ ಸಂಕದಹೊಳೆ ಗ್ರಾಮದ ಬಳಿ ನದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ವ್ಯಕ್ತಿಯನ್ನು ಇಬ್ಬರು ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಸಹಾಯದಿಂದ ರಕ್ಷಿಸಿದ್ದಾರೆ.

ಶಿವಮೊಗ್ಗ: ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ!
ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ ಇಂದು ಬೆಳಗ್ಗೆ ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ.

ಮುಸ್ಲಿಂರನ್ನು ಬೇಟೆಯಾಡಿ ಕೊಲ್ಲುವ ಕಾಲ ಬರುತ್ತೆ: ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಕೆಎಸ್ ಈಶ್ವರಪ್ಪ ವಿರುದ್ಧ FIR
ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ. ಪೊಲೀಸರ ದೂರಿನಲ್ಲಿ ವಕ್ಫ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಸ್ಲಿಮರು ದೌರ್ಜನ್ಯ ನಡೆಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಮೌನವಾಗಿದೆ ಎಂದು ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.

ಮುಂಬೈ ಸೈಬರ್ ಪೊಲೀಸರ ಹೆಸರಿನಲ್ಲಿ ಕರೆ: ನಾಲ್ಕು 4 ಲಕ್ಷ ರೂ. ಕಳೆದುಕೊಂಡ ಶಿವಮೊಗ್ಗ ಯುವತಿ
ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ನವೆಂಬರ್ 4 ರಂದು ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದ್ದು, ತಾವು ಫೆಡ್‌ಎಕ್ಸ್‌ನಿಂದ ಮಾತನಾಡುತ್ತಿದ್ದು, ನಿಮ್ಮ ಹೆಸರಿನಲ್ಲಿ ಇರಾನ್ ಗೆ ಪಾರ್ಸಲ್ ಹೋಗುತ್ತಿದೆ.

ಶಿವಮೊಗ್ಗ: ಜಾಹಿರಾತು ಫಲಕದ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ವಿದ್ಯಾರ್ಥಿಗಳು ತೆರಳುತ್ತಿದ್ದ ಬೈಕ್, ನಿಯಂತ್ರಣ ತಪ್ಪಿ ಮರ ಹಾಗೂ ಜಾಹಿರಾತು ಫಲಕ ಅಳವಡಿಸಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಶಿವಮೊಗ್ಗ: ತಪಾಸಣೆಗೆ ತಡೆದ ಸಂಚಾರಿ ಪೊಲೀಸ್ ಅಧಿಕಾರಿಯನ್ನು ಬಾನೆಟ್ ಮೇಲೆ ಹೊತ್ತೊಯ್ದ ಕಾರು!
ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸರು ಸಹ್ಯಾದ್ರಿ ಕಾಲೇಜು ಮುಂಭಾಗ ವಾಹನ ತಪಾಸಣೆ ನಡೆಸುತ್ತಿದ್ದರು. ಅಲ್ಲಿಗೆ ಕಾರೊಂದು, ಈ ವೇಳೆ ಕಾರು ನಿಲ್ಲಿಸುವಂತೆ ಚಾಲಕನಿಗೆ ಟ್ರಾಫಿಕ್ ಪೊಲೀಸ್ ಅಧಿಕಾರಿ ಸೂಚಿಸಿದ್ದಾರೆ. ಆದರೆ ಆತ ನಿಲ್ಲಿಸದೆ ಮುಂದೆ ಸಾಗಿದ್ದಾನೆ.

ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ: ಶಂಕಿತರ ವಿರುದ್ಧ NIA ಮತ್ತೊಂದು ಚಾರ್ಜ್‌ಶೀಟ್ ಸಲ್ಲಿಕೆ; ಇಸಿಸ್ ಜೊತೆ ನಂಟು ಬಹಿರಂಗ
ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಈ ಮೂಲಕ ಶಿವಮೊಗ್ಗ ಮಾದರಿ ಪ್ರಕರಣದ ಆರೋಪಿಗಳ ಪಟ್ಟಿ ಹತ್ತಕ್ಕೇರಿದಂತಾಗಿದೆ.

ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಸಾವು!
ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ.

ಶಿವಮೊಗ್ಗ: ಬೇಕರಿಯಲ್ಲಿ ಅಗ್ನಿ ಅವಘಡ, ಸಿಲಿಂಡರ್ ಸ್ಫೋಟ
ಆ.21 ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಘಟನೆ ನಡೆಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದೆ.

