Shivamogga

ಪಕ್ಷದ ವಿರುದ್ಧ ಕೆಎಸ್ ಈಶ್ವರಪ್ಪ ಬಂಡಾಯ: ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಘೋಷಣೆ!
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಇದೀಗ ಲೋಕಸಭೆ ಚುನಾವಣೆಯಲ್ಲೂ ತಮ್ಮ ಪುತ್ರನಿಗೆ ಟಿಕೆಟ್ ಸಿಗದ್ದಿದ್ದಕ್ಕೆ ಬಿಜೆಪಿ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ಅಲ್ಲದೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.

ಪುತ್ರನಿಗೆ ತಪ್ಪಿದ ಟಿಕೆಟ್: ಈಶ್ವರಪ್ಪ ಕೆಂಡಾಮಂಡಲ, ಬಿಎಸ್ ವೈ ವಿರುದ್ಧ ಆರೋಪ
ನಾನು ಎಂದಿಗೂ ಒಂದು ಸಮುದಾಯದ ನಾಯಕನಾಗಿ ಸೀಮಿತನಾಗಲಿಲ್ಲ ಎಂಬ ಹೆಮ್ಮೆ ನನಗಿದೆ. ಹಿಂದುತ್ವ ಸಿದ್ಧಾಂತವನ್ನು ಪ್ರತಿಪಾದಿಸಿಕೊಂಡು ಬಂದಿದ್ದೇನೆ ಎಂದ ಈಶ್ವರಪ್ಪ.

ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನು ಒಂದಾಗಿಸಲು ನಾನ್ಯಾರು?: ಶಿವರಾಜ್ ಕುಮಾರ್
ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನ ಒಂದಾಗಿಸಲು ನಾನ್ಯಾರು? ನಾನು ಅವರ ಮನೆಯ ಅಳಿಯ ಅಷ್ಟೇ, ಮಗನಲ್ಲ ಎಂದು ನಟ ಶಿವರಾಜಕುಮಾರ್ ಹೇಳಿದ್ದಾರೆ.

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಕೇಸ್: ಆರೋಪಿ ಬಿಡುಗಡೆ ಮಾಡಲು ನಿರಾಕರಿಸಿದ ಎನ್‌ಐಎ ನ್ಯಾಯಾಲಯ
2022ರ ಫೆಬ್ರುವರಿ 20ರಂದು ಶಿವಮೊಗ್ಗದಲ್ಲಿ ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿ ಸೈಯದ್ ನದೀಮ್‌ನನ್ನು ಬಿಡುಗಡೆ ಮಾಡಲು ಎನ್‌ಐಎ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ಹತ್ಯೆಗೆ ಸಂಬಂಧಿಸಿದಂತೆ 10 ಆರೋಪಿಗಳಲ್ಲಿ ನದೀಮ್ ಆರೋಪಿ ನಂ. 9 ಆಗಿದ್ದಾನೆ.

ಶಿವಮೊಗ್ಗ ಇಸಿಸ್ ಪಿತೂರಿ, ಮಂಗಳೂರು ಗೋಡೆ ಬರಹ ಪ್ರಕರಣ: ಎನ್ಐಎಯಿಂದ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಕೆ
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮತ್ತೊಬ್ಬ ಆರೋಪಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Lok Sabha election: ಶಿವಮೊಗ್ಗದಲ್ಲಿ ಇಬ್ಬರು ಮಾಜಿ ಸಿಎಂಗಳ ಮಕ್ಕಳು ಮುಖಾಮುಖಿ
ಗೀತಾ ಶಿವರಾಜ್ ಕುಮಾರ್ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ, ಹಾಲಿ ಸಂಸದ ಬಿ ವೈ ರಾಘವೇಂದ್ರ ಅವರು ಬಿಜೆಪಿಯ ಅಗ್ರಗಣ್ಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ.

ಮೂರು ತಿಂಗಳ ನಂತರ ಮೇಲ್ಮನೆಯಲ್ಲಿ ಹಿಂದೂ ಧಾರ್ಮಿಕ ದತ್ತಿ ಕಾಯ್ದೆಗೆ ಅನುಮೋದನೆ- ಡಿಕೆ ಶಿವಕುಮಾರ್
ವಿಧಾನಪರಿಷತ್ತಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಿಂದ ತಿರಸ್ಕೃತಗೊಂಡಿರುವ ಹಿಂದೂ ಧಾರ್ಮಿಕ ದತ್ತಿ ವಿಧೇಯಕಕ್ಕೆ ಮೂರು ತಿಂಗಳ ನಂತರ ಮೇಲ್ಮನೆಯಲ್ಲಿ ಕಾಂಗ್ರೆಸ್ ಗೆ ಮತ್ತೆ ಬಹುಮತ ಬಂದಾಗ ಅನುಮೋದನೆ ದೊರೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ.

ಶಿವಮೊಗ್ಗ: ಭದ್ರಾ ಕಾಲುವೆಯಲ್ಲಿ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಸೆಕ್ಷನ್ 144 ಜಾರಿ
ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯದಿಂದ ಹಾವೇರಿ ಮತ್ತು ಗದಗ ಜಿಲ್ಲೆಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾಲುವೆಗೆ ನೀರು ಬಿಟ್ಟಿದ್ದರೂ ಅದು ಇನ್ನೂ ನಿಗದಿತ ಸ್ಥಳಗಳಿಗೆ ತಲುಪಿಲ್ಲ.

ಶಿವಮೊಗ್ಗ: ಮಗ ಮಾಡಿದ ತಪ್ಪಿಗೆ ತಾಯಿ, ಸಹೋದರಿಗೆ ಸಾಮಾಜಿಕ ಬಹಿಷ್ಕಾರ!
ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಕುಳವಳ್ಳಿಯಲ್ಲಿ ಈಡಿಗ ಸಮುದಾಯದ ತಾಯಿ ಮತ್ತು ಮಗಳು ಸಾಮಾಜಿಕ ಬಹಿಷ್ಕಾರಕ್ಕೆ ಗುರಿಯಾಗಿದ್ದಾರೆ.

