Shivamogga

ಶಿವಮೊಗ್ಗ: ಭದ್ರಾವತಿಯಲ್ಲಿ ಸಿಡಿಲು ಬಡಿದು ಸಹೋದರರಿಬ್ಬರ ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ನಡೆದಿದೆ. ಭದ್ರಾವತಿ ಪಟ್ಟಣದ ಹುಣಸಕಟ್ಟೆ ಜಂಕ್ಷನ್ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು 32 ವರ್ಷದ ಬೀರು (ಎಸ್ ಬೀರೇಶ್) ಮತ್ತು 30 ವರ್ಷದ ಎಸ್ ಸುರೇಶ್ ಎಂದು ಗುರುತಿಸಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಸೇರಿ ಮೋದಿ ಕೈ ಬಲಪಡಿಸೋಣ: ಈಶ್ವರಪ್ಪ ಭೇಟಿ ನಂತರ ವಿಜಯೇಂದ್ರ ಹೇಳಿಕೆ
ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ ನೀಡಿದ್ದಾರೆ.

ಶಿವಮೊಗ್ಗ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಬಂಧನ
ಚಾಕಲೇಟ್ ಕೊಡಿಸುವುದಾಗಿ ಆಮಿಷ ಒಡ್ಡಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಕೂಡ್ಲಿ ಗ್ರಾಮದಲ್ಲಿ ಈ ಪ್ರಕರಣ ನಡೆದಿತ್ತು.

ಶಿಕ್ಷಣ ಸಚಿವರ ಜಿಲ್ಲೆಯಲ್ಲೊಂದು ಅಮಾನುಷ ಘಟನೆ: ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಶಿಕ್ಷಕ!
ಸರ್ಕಾರಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಶಾಲೆಯಲ್ಲಿ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಆರೋಪ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಮೃತ ಗ್ರಾಮದಲ್ಲಿ ಕೇಳಿಬಂದಿದೆ.

ಶಿವಮೊಗ್ಗದಿಂದ ಹೈದರಾಬಾದ್, ತಿರುಪತಿ, ಗೋವಾಕ್ಕೆ ಸ್ಟಾರ್ ಏರ್ ವಿಮಾನ ಸೇವೆ ಆರಂಭ
ಮಂಗಳವಾರದಿಂದ ಸ್ಟಾರ್ ಏರ್ ವಿಮಾನಯಾನ ಸಂಸ್ಥೆಯು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಹೈದರಾಬಾದ್, ತಿರುಪತಿ ಮತ್ತು ಗೋವಾಕ್ಕೆ ಮೂರು ಹೊಸ ದೈನಂದಿನ ವಿಮಾನಗಳ ಸಂಚಾರವನ್ನು ಪ್ರಾರಂಭಿಸಲಿದೆ.

ಇಂಡಿಗೋ ಏರ್ ಲೈನ್ಸ್ ಸಿಬ್ಬಂದಿ ಯಡವಟ್ಟು, ಶಿವಮೊಗ್ಗ ತೆರಳಬೇಕಾದ ಪ್ರಯಾಣಿಕರ ಪರದಾಟ!
ಇಂಡಿಗೋ ಏರ್ಲೈನ್ಸ್ನ ಸಿಬ್ಬಂದಿಯ ಸಮನ್ವಯದ ಕೊರತೆ ಮತ್ತು ತಪ್ಪು ಮಾಹಿತಿಯಿಂದಾಗಿ ಗುರುವಾರ ಬೆಳಗ್ಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟ್ಟಿದ್ದ ವಿಮಾನ ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.

ಶಿವಮೊಗ್ಗ: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ
ಶಿವಮೊಗ್ಗ ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಶಿವಮೊಗ್ಗ ಕಾಂಗ್ರೆಸ್ ನಲ್ಲಿ ಭಿನ್ನಮತ: ಸಚಿವರ ಅಡುಗೆ ಮನೆಯಲ್ಲಿರುವವರ ದೂರಿಗೆ ಡೋಂಟ್ ಕೇರ್; ತಾರಕಕ್ಕೇರಿದ ಬೇಳೂರು- ಮಧು ಗುದ್ದಾಟ!
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ನಡುವಿನ ತಿಕ್ಕಾಟ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ.

ಶಿವಮೊಗ್ಗ: ಅನುಮಾನಾಸ್ಪದ ಬಾಕ್ಸ್ ಪತ್ತೆ ಪ್ರಕರಣದ ತನಿಖೆಯಿಂದ ನಕಲಿ ಸಾಲ ದಂಧೆ ಬಯಲಿಗೆ!
ಶಿವಮೊಗ್ಗ ಪೊಲೀಸ್ ಠಾಣಾ ಬಳಿ ಎರಡು ಅನುಮಾನಾಸ್ಪದ ಪೆಟ್ಟಿಗೆಗಳು ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸಿದಾಗ ನಕಲಿ ಸಾಲದ ದಂಧೆ ಬಯಲಿಗೆ ಬಂದಿದೆ. ಈ ಸಂಬಂಧ ಬಾಬಾ ಅಲಿಯಾಸ್ ನಜ್ರುಲ್ಲಾ ಮತ್ತು ಮೊಹಮ್ಮದ್ ಜಬೀವುಲ್ಲಾ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

