Shivamogga

ಶಿವಮೊಗ್ಗ: ಮೈದುಂಬಿ ಹರಿಯುತ್ತಿರುವ ತುಂಗಾ-ಭದ್ರಾ; ಜಲಾಶಯಗಳಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!
ಮಳೆಯಿಂದ ತುಂಗಾ ನದಿಯೂ ತುಂಬಿ ಹರಿಯುತ್ತಿದ್ದು, ಅಣೆಕಟ್ಟಿನಿಂದ 89,503 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ನದಿ ತೀರದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು.

ಶಿವಮೊಗ್ಗದ ಲಾಡ್ಜ್‌ನಲ್ಲಿ ಉದ್ಯಮಿ ಆತ್ಮಹತ್ಯೆಗೆ ಶರಣು; ಕಾರಣ ನಿಗೂಢ!
ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯನ್ನು ಗೋಪಾಳ ಬಡಾವಣೆಯ ನಿವಾಸಿ ನವೀನ್ ಕುಮಾರ್ ಬಳಗಾರ್ ಅಲಿಯಾಸ್ ಬಸವರಾಜ್ (42) ಎಂದು ಗುರುತಿಸಲಾಗಿದೆ.

ಶಿವಮೊಗ್ಗ: ವಿದ್ಯಾರ್ಥಿನಿ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!
ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಅವರು ವಿದ್ಯಾರ್ಥಿನಿಯನ್ನು 7ನೇ ತರಗತಿಗೆ ದಾಖಲಿಸಿಕೊಳ್ಳಲು 20 ಸಾವಿರ ರೂ. ಲಂಚ ಕೇಳಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಶಿವಮೊಗ್ಗ: ಪೇಪರ್ ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ; Video
ಕಾರ್ಖಾನೆಯಾದ್ಯಂತ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ಬೆಂಕಿಯ ತೀವ್ರತೆ ಅರಿತ ತಕ್ಷಣವೇ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗೆ ಓಡಿಬಂದಿದ್ದರಿಂದ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಶಿವಮೊಗ್ಗ ರೈತರಿಗೆ ಆಘಾತ: ಭದ್ರಾ ಜಲಾಶಯದ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಮೀಸಲು; ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ..!
ಜಲಾಶಯದ ನೀರಿನ ಮೇಲೆ ಅವಲಂಬಿತವಾಗಿರುವ ರೈತರಿಗೆ ಈ ನಿರ್ಧಾರದಿಂದ ತೊಂದರೆಯಾಗಲಿದೆ ಎಂಬುದನ್ನು ಜಿಲ್ಲಾಡಳಿತ ಒಪ್ಪಿಕೊಂಡಿದ್ದು, ನೀರಾವರಿ ಉದ್ದೇಶಕ್ಕೆ ನೀರು ಬಿಡುಗಡೆ ಕಡಿಮೆಯಾಗುವುದರಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ.

ಶಿವಮೊಗ್ಗದಲ್ಲಿ ಭಾರಿ ಮಳೆ: ಭೋರ್ಗರೆದು ಹರಿಯುತ್ತಿರುವ ನದಿಗಳು; ಮೂರು ಜಲಾಶಯ ಭರ್ತಿ!
ನಿರಂತರ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ಪ್ರಮುಖ ಜಲಾಶಯಗಳು ಮತ್ತು ಜಲಮೂಲಗಳಲ್ಲಿ ನೀರಿನ ಮಟ್ಟದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳಲ್ಲಿನ ಶಾಲೆಗಳು ಮತ್ತು ಕಾಲೇಜುಗಳಿಗೆ ಮಂಗಳವಾರ ಶಿಕ್ಷಣ ಇಲಾಖೆ ರಜೆ ಘೋಷಿಸಿತ್ತು.

ರಾಜ್ಯದಲ್ಲಿ SIR ಕರ್ತವ್ಯದ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಕುಸಿದು ಬಿದ್ದು BLO ಸಾವು
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕರ್ತವ್ಯದ ವೇಳೆಯಲ್ಲೇ ಹೃದಯಾಘಾತದಿಂದ BLO ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಭದ್ರಾವತಿ ತಾಲೂಕಿನ ಕಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ: ಮದುವೆಯಾದ ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ; ಕಾರಣ ನಿಗೂಢ!
ಆತ್ಮಹತ್ಯೆಗೆ ಶರಣಾದ ಯುವತಿಯನ್ನು 24 ವರ್ಷದ ಸ್ವಾತಿ ಎಂದು ಗುರುತಿಸಲಾಗಿದ್ದು, ಎರಡು ತಿಂಗಳ ಹಿಂದಷ್ಟೇ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಸ್ವರೂಪ್ ಅವರನ್ನು ಮದುವೆಯಾಗಿದ್ದಳು.

ಶಿವಮೊಗ್ಗ: ಮಹಿಷಿ ಉತ್ತರಾಧಿ ಮಠದಲ್ಲಿ 1 ಕೋಟಿ ರೂ. ಮೌಲ್ಯದ ಚಿನ್ನ ದೋಚಿದ್ದ ಕಳ್ಳನ ಬಂಧನ
ಶ್ರೀ ಸತ್ಯಸಂಧಗುರು ಉತ್ತರಾಧಿ ಮಠದಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ಚಿನ್ನಾಭರಣಗಳನ್ನು ವಶಪಡಿಸಿದ್ದಾರೆ.

