ದೇಶಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಹಾಡಿರುವ 'ಪೂಜಿಸಲೆಂದೇ ಹೂಗಳ ತಂದೆ' ಹಾಡಿಗೆ ಪ್ರಧಾನಿ ಮೋದಿ ಮೆಚ್ಚುಗೆ
ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮಲಲ್ಲಾ ಪ್ರಾಣಪ್ರತಿಷ್ಠಾನ ಕಾರ್ಯಕ್ರಮ ನೆರವೇರಲಿದ್ದು, ಅದಕ್ಕೆ ಪೂರ್ವ ತಯಾರಿ ಈಗಾಗಲೇ ನಡೆಯುತ್ತಿವೆ. ರಾಮ ಮಂದಿರ ಉದ್ಘಾಟನೆ ಬಗ್ಗೆ ಹತ್ತು ಹಲವು ವಿಷಯಗಳನ್ನು ಪ್ರಧಾನಿ ಮೋದಿಯವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ.