Shivmogga

ಫೆ.27ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ: ಅಗತ್ಯ ಸಿದ್ಧತೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ
ಫೆ.27ರಂದು ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದು, ಕಾರ್ಯಕ್ರಮವನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆಗಳ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಸೂಚನೆ ನೀಡಿದ್ದಾರೆ.

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚದಿರಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್)ಯನ್ನು ಮುಚ್ಚಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಂಡಿದ್ದಾರೆ.

ಭದ್ರಾ ಡ್ಯಾಂ ಬಳಿ ತಡೆಗೋಡೆ ಕುಸಿತ: ಸಂಚಾರ ಸ್ಥಗಿತಕ್ಕೆ ಆಗ್ರಹ
ಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಂ ಬಳಿ ತಡೆಗೋಡೆಯ ಭಾಗವೊಂದು ಸೋಮವಾರ ಕುಸಿದಿದ್ದು, ಈ ರಸ್ತೆಯಲ್ಲಿ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಆಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.

ವಾರಾಂತ್ಯಕ್ಕೆ ಸ್ವಕ್ಷೇತ್ರ ಶಿಕಾರಿಪುರಕ್ಕೆ ಸಿಎಂ ಯಡಿಯೂರಪ್ಪ ಭೇಟಿ
ವಾರಾಂತ್ಯದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗ ಮತ್ತು ಸ್ವಕ್ಷೇತ್ರ ಶಿಕಾರಿಪುರಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಶಿವಮೊಗ್ಗ: ವೆಂಟಿಲೇಟರ್ ಸಿಗದೆ ನರಳಾಡಿ ಸೋಂಕಿತ ವ್ಯಕ್ತಿ ದಾರುಣ ಸಾವು
ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬರಿಗೆ ಸೂಕ್ತ ಸಮಯಕ್ಕೆ ವೆಂಟಿಲೇಟರ್ ಸಿಗದೇ ಆಸ್ಪತ್ರೆ ವಾರ್ಡಿನಲ್ಲಿ 2 ಗಂಟೆಗಳ ಕಾಲ ತೀವ್ರ ನರಳಾಡಿ ಕೊನೆಯುಸಿರೆಳೆದ ದಾರುಣ ಘಟನೆ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ಬಜರಂಗದಳದ ಮುಖಂಡನ ಮೇಲೆ ಹಲ್ಲೆ; ಶಿವಮೊಗ್ಗ ಉದ್ವಿಗ್ನ, ನಗರದಾದ್ಯಂತ ನಿಷೇಧಾಜ್ಞೆ ಜಾರಿ
ಗೋವುಗಳ ರಕ್ಷಣೆ ಕಾರ್ಯ ಮಾಡುತ್ತಿದ್ದ ಬಜರಂಗದಳದ ಮುಖಂಡರೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಗೋಪಾಳದಲ್ಲಿ ಮೂವರಿಗೆ ಥಳಿಸಿ ಒಬ್ಬನಿಗೆ ಇರಿಯಲಾಗಿದ್ದು, ಘಟನೆ ಬಳಿಕ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಕೋವಿಡ್-19: ಶಿವಮೊಗ್ಗದಲ್ಲಿ 10,000 ಜನರ ಸ್ಯಾಂಪಲ್ಸ್ ಪರೀಕ್ಷೆ
ಶಿವಮೊಗ್ಗ ಜಿಲ್ಲೆಯಲ್ಲಿ ಈ ವರೆಗೂ 10,000 ಜನರಕ್ಕೂ ಹೆಚ್ಚು ಜನರ ಸ್ಯಾಂಪಲ್ಸ್ ಸಂಗ್ರಹಿಸಲಾಗಿದ್ದು, ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ರಾಜ್ಯಬಜೆಟ್ 2020-21: ತವರು ಜಿಲ್ಲೆ ಶಿವಮೊಗ್ಗಕ್ಕೆ ಬಿಎಸ್'ವೈ ಕೊಡುಗೆ ಏನು?
2020-21ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.

