Shivraj Singh Chouhan

ದೇಗುಲದ ಬಾವಿಯ ಛಾವಣಿ ಕುಸಿತ ಪ್ರಕರಣ: ಮೃತರ ಸಂಖ್ಯೆ 36ಕ್ಕೆ ಏರಿಕೆ, ಸ್ಥಳಕ್ಕೆ ಸಿಎಂ ಚೌಹಾಣ್ ಭೇಟಿ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಭರವಸೆ!
ಇಂದೋರ್'ನ ದೇವಸ್ಥಾನವೊಂದರ ಮೆಟ್ಟಿಲು ಬಾವಿ ಕುಸಿತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 36ಕ್ಕೆ ಏರಿಕೆಯಾಗಿದ್ದು, ಘಟನಾ ಸ್ಥಳಕ್ಕೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಭೇಟಿ ನೀಡಿ, ಶುಕ್ರವಾರ ಪರಿಶೀಲನೆ ನಡಸಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಕುರಿತು ದಿಗ್ವಿಜಯ್ ಸಿಂಗ್ ಹೇಳಿಕೆ: ಕಾಂಗ್ರೆಸ್ ಡಿಎನ್ಎ ಪಾಕಿಸ್ತಾನದ ಪರವಾಗಿದೆ- ಶಿವರಾಜ್ ಸಿಂಗ್ ಚೌಹಾಣ್
ಕಾಂಗ್ರೆಸ್ ಡಿಎನ್ಎ ಪಾಕಿಸ್ತಾನದ ಪರವಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಂಗಳವಾರ ಹೇಳಿದ್ದಾರೆ.

ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಭಾನುವಾರ ಧಾರ್ ಜಿಲ್ಲೆಯ ಮನವಾರ್ ಪಟ್ಟಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹೆಲಿಕಾಪ್ಟರ್ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ...

ಹೂಡಿಕೆದಾರರ ಓಲೈಸಲು ಬೆಂಗಳೂರಿಗೆ ಬಂದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್!
ಕರ್ನಾಟಕವು ಜಾಗತಿಕ ಹೂಡಿಕೆದಾರರ ಸಭೆ ಮತ್ತು ಬೆಂಗಳೂರು ಟೆಕ್ ಶೃಂಗಸಭೆಯನ್ನು ಆಯೋಜಿಸಿದ ಬೆನ್ನಲ್ಲೇ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಜವಳಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೂಡಿಕೆದಾರರನ್ನು ಸೆಳೆಯಲು ಬೆಂಗಳೂರಿಗೆ ಆಗಮಿಸಿದ್ದಾರೆ.

ಹಿಂದುಳಿದ ವರ್ಗಗಳ ರಾಜ್ಯ ಮಟ್ಟದ ಸಮಾವೇಶ: ಮಧ್ಯಪ್ರದೇಶ ಸಿಎಂ ಚೌಹಾಣ್ ಭಾಗಿ ಸಾಧ್ಯತೆ
ಕಲಬುರಗಿಯಲ್ಲಿ ಅಕ್ಟೋಬರ್ 30 ರಂದು ರಾಜ್ಯಮಟ್ಟದ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ಆಯೋಜಿಸಲಾಗಿದ್ದು, ಈ ಸಮಾವೇಶದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪಾಲ್ಗೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ.

1 ಕಿ.ಮೀ ಚಿರತೆಯನ್ನು ಅಟ್ಟಾಡಿಸಿಕೊಂಡು ಹೋಗಿ ತನ್ನ ಪುತ್ರನನ್ನು ರಕ್ಷಿಸಿದ ತಾಯಿ, ಮಧ್ಯ ಪ್ರದೇಶ ಸಿಎಂ ಶ್ಲಾಘನೆ!
ತನ್ನ ಮಗನನ್ನು ಹೊತ್ತೊಯ್ದಿದ್ದ ಚಿರತೆಯನ್ನು ತಾಯಿಯೊಬ್ಬಳು ಬರೊಬ್ಬರಿ 1 ಕಿ.ಮೀ ಅಟ್ಟಾಡಿಸಿಕೊಂಡು ಹೋಗಿ ಅದರೊಂದಿಗೆ ಕಾದಾಡಿ ತನ್ನ ಮಗುವನ್ನು ರಕ್ಷಿಸಿಕೊಂಡು ಬಂದಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ಗಿಡ ನೆಡುವ ಜನರಿಗೆ ಪ್ರಶಸ್ತಿ ನೀಡುವ ಯೋಜನೆ ಪ್ರಾರಂಭಿಸಿದ ಮಧ್ಯಪ್ರದೇಶ ಸರ್ಕಾರ
ಮಳೆಗಾಲದಲ್ಲಿ ಗಿಡಗಳನ್ನು ನೆಡುವ ನಾಗರಿಕರಿಗೆ ಪ್ರಶಸ್ತಿ ನೀಡುವ ಯೋಜನೆ ಅಂಕೂರ್ ಅನ್ನು ಪ್ರಾರಂಭಿಸುವುದಾಗಿ ಮಧ್ಯಪ್ರದೇಶ ಸರ್ಕಾರ ಶನಿವಾರ ಪ್ರಕಟಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊರೋನಾದಿಂದ ಪೋಷಕರ ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ, ಅನಾಥರಿಗೆ ಪಿಂಚಣಿ: ಮಧ್ಯಪ್ರದೇಶ ಸರ್ಕಾರ ಘೋಷಣೆ
ಕೋವಿಡ್ ನಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ ಮಧ್ಯಪ್ರದೇಶ ಸರ್ಕಾರವು ಉಚಿತ ಶಿಕ್ಷಣ ಮತ್ತು ತಿಂಗಳಿಗೆ 5,000 ರೂ. ಪಿಂಚಣಿ ನೀಡಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ತಿಳಿಸಿದ್ದಾರೆ.

ಗೋವುಗಳ ಸಂರಕ್ಷಣೆಗಾಗಿಯೇ ಪ್ರತ್ಯೇಕ ಸಚಿವಾಲಯ ರಚಿಸಲು ಮಧ್ಯಪ್ರದೇಶ ಸರ್ಕಾರ ಮುಂದು
ಗೋವುಗಳ ಸಂರಕ್ಷಣೆಗಾಗಿಯೇ ಪ್ರತ್ಯೇಕ ಸಚಿವಾಲಯವೊಂದನ್ನು ರಚನೆ ಮಾಡಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ.

