Shobha Karandlaje

ಶೋಭಾ ಕರಂದ್ಲಾಜೆಗೆ ಗಲ್ಫ್ ರಾಷ್ಟ್ರಗಳಿಂದ ಜೀವ ಬೆದರಿಕೆ ಕರೆ
ಮಧ್ಯ ಪೂರ್ವ ಮತ್ತು ಗಲ್ಪ್ ರಾಷ್ಟ್ರಗಳಿಂದ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಆರೋಪಿಸಿದ್ದಾರೆ.

ತಬ್ಲಿಘಿ ಜಮಾತ್ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಕ್ರಿಮಿನಲ್ ಕೇಸ್: ಪಿಎಫ್ಐ ವಿರುದ್ದ ಕಿಡಿಕಾರಿದ ಶೋಭಾ ಕರಂದ್ಲಾಜೆ
ದೆಹಲಿಯಲ್ಲಿ ನಡೆದ ತಬ್ಲೀಗ್ ಜಮಾತ್ ಸಭೆಯಲ್ಲಿ ಪಾಲ್ಗೊಂಡವರ ಕುರಿತು ಹೇಳಿಕೆ ನೀಡಿದ್ದಕ್ಕೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಹೇಳಿದ್ದ ಪಿಎಫ್ಐ ವಿರುದ್ದ ಸಂಸದೆ ಶೋಭಾ ಕರಂದ್ಲಾಜೆಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ಕೊರೊನಾ ಸೋಂಕು ಪತ್ತೆಯಾದವರೆಲ್ಲ ಜಮಾತ್ಗೆ ಹೋಗಿ ಬಂದವರಾ? ಬಡವರ ಜೀವಹಾನಿಯಲ್ಲೂ ಧರ್ಮ ರಾಜಕಾರಣ !
ಕೊರೊನಾ ರೋಗಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಅವರು ಧರ್ಮದ ಲೇಪನ ಮಾಡುತ್ತಿರುವುದನ್ನು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಟ್ವೀಟ್ ಮಾಡುವ ಮೂಲಕ ಖಂಡಿಸಿದ್ದಾರೆ.

ನಿಜಾಮುದ್ದೀನ್ ತಬ್ಲೀಘಿ ಹಿಂದೆ ಕೊರೋನಾ ಜಿಹಾದಿ ದುರುದ್ದೇಶವಿದೆ: ಶೋಭಾ ಕರಂದ್ಲಾಜೆ
ದೆಹಲಿಯ ನಿಜಾಮುದ್ದೀನ್ ತಬ್ಲೀಘಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಿಂದ ಕೊರೋನಾ ವೈರಸ್ ಹರಡಿಸುವ ದುಷ್ಕೃತ್ಯ ನಡೆದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಪಾಕಿಸ್ತಾನಕ್ಕೆ ಟ್ರಂಪ್ ಎಚ್ಚರಿಕೆ: ಮೋದಿ-ಟ್ರಂಪ್ ಗೆ ಸಿದ್ದರಾಮಯ್ಯ ಪಾಠದ ಅಗತ್ಯವಿಲ್ಲ; ಶೋಭಾ
ಭಾರತ - ಅಮೆರಿಕ ಸಂಬಂಧ ಬಲಗೊಳ್ಳಬೇಕು ಎಂಬ ಅಪೇಕ್ಷೆ ಬಹು ಕಾಲದಿಂದ ಇತ್ತು. ಇದೀಗ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಭಾರತ ಪ್ರವಾಸದಿಂದ ಇದು ಸಾಕಾರಗೊಳ್ಳಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಟ್ವೀಟ್ ವಿರುದ್ಧ ಪ್ರಕರಣ: ಕೇರಳ ಸರ್ಕಾರಕ್ಕೆ ತಿರುಗೇಟು ನೀಡಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ
ತಾವು ಮಾಡಿದ್ದ ಟ್ವೀಟ್ ಗೆ ಸಂಬಂಧಿಸಿದಂತೆ ಕೇರಳದಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆಯೇ ಇತ್ತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮತ್ತೊಂದು ಟ್ವೀಟ್ ಮೂಲಕ ಕೇರಳ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೇರಳ ಮತ್ತೊಂದು ಕಾಶ್ಮೀರವಾಗುತ್ತಿದೆ ಹೇಳಿಕೆ: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲು
ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿದ್ದ ಮಲಪ್ಪುರಂನ ಕೆಲ ಹಿಂದೂ ಕುಟುಂಬಗಳಿಗೆ ಕೇರಳ ಸರ್ಕಾರ ನೀರು ಸರಬರಾಜನ್ನು ತಡೆ ಹಿಡಿದಿದೆ ಎಂದು ಸಾಮಾಜಿಕ ತಾಣ ಟ್ವಿಟ್ಟರ್ ನಲ್ಲಿ ಆರೋಪಿಸಿದ್ದ ಉಡುಪಿ-ಚಿಕ್ಕಮಗಳೂರು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕುಮಾರಸ್ವಾಮಿ ಸಿಡಿ ‘ಕಟ್ ಅಂಡ್ ಪೇಸ್ಟ್’: ಶೋಭಾ ಕರಂದ್ಲಾಜೆ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಗಳೂರು ಗಲಭೆ ಕುರಿತು ಬಿಡುಗಡೆ ಮಾಡಿರುವ ಸಿಡಿ ‘ಕಟ್ ಅಂಡ್ ಪೇಸ್ಟ್ ಸಿಡಿ’ಯಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.

ಯುವತಿ ಮೇಲೆ ಅತ್ಯಾಚಾರ, ಮತಾಂತರಕ್ಕೆ ಯತ್ನ: ಆರೋಪಿಗಳ ವಿರುದ್ಧ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಗ್ರಹ
ರಾಜ್ಯದಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಮಾಡುತ್ತಿದ್ದು, ಯುವತಿ ಮೇಲೆ ಬರೋಬ್ಬರಿ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಮಾಡಿರುವ ಕಾಮುಕರು, ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಒತ್ತಡ ಹೇರುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಲುವಂತೆ ಸಂಸದೆ ಶೋಭಾ ಕರಂದ್ಲಾಜೆಯವರು ಆಗ್ರಹಿಸಿದ್ದಾರೆ.

