ರಾಜ್ಯರಾಜ್ಯದ 48 ಲಕ್ಷ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆಗೆ 132 ಕೋಟಿ ರೂ. ಮಂಜೂರು: ಮುಖ್ಯಮಂತ್ರಿ ಬೊಮ್ಮಾಯಿ
ತರಗತಿಗಳು ಆರಂಭವಾಗಿ ಏಳು ವಾರಗಳು ಕಳೆದಿದ್ದರೂ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಗಳನ್ನು ವಿತರಿಸದೆ ಟೀಕೆಗಳಿಗೆ ಗುರಿಯಾಗಿದ್ದ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ತಕ್ಷಣವೇ ಪೂರೈಸುವುದಾಗಿ ಶುಕ್ರವಾರ ಪ್ರಕಟಿಸಿದೆ.