Shot Out

ನೆಲಮಂಗಲ: ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಮೇಲೆ ಗುಂಡಿನ ದಾಳಿ!
ನೆಲಮಂಗಲ ತಾಲೂಕಿನ ಇಸ್ಲಾಂಪುರದಲ್ಲಿ ಮನೆ ಮುಂದೆ ನಿಂತಿದ್ದ ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ಕಳ್ಳತನ ತಡೆಯಲು ಯತ್ನ: ಖದೀಮರ ಗುಂಡೇಟಿಗೆ 37 ವರ್ಷದ ಹಾಲಿವುಡ್ ನಟ ಜಾನಿ ವೆಕ್ಟರ್ ಬಲಿ!
ಹಾಲಿವುಡ್ ಸೋಪ್ ಒಪೆರಾ ನಟ ಜಾನಿ ವೆಕ್ಟರ್ ಅವರನ್ನು ಲಾಸ್ ಏಂಜಲೀಸ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜಾನಿ ವೆಕ್ಟರ್ 'ದಿ ವೆಸ್ಟ್‌ವರ್ಲ್ಡ್', 'ಸ್ಟೇಷನ್ 19', 'ಕ್ರಿಮಿನಲ್ ಮೈಂಡ್' ಮತ್ತು 'ಹಾಲಿವುಡ್ ಗರ್ಲ್' ನಂತಹ ಕಾರ್ಯಕ್ರಮಗಳಲ್ಲಿ ಕೆಲಸ ಮಾಡಿದರು.

ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿ; ಶಂಕಿತನ ಬಂಧನ
ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೋ ಮೇಲೆ ಗುಂಡಿನ ದಾಳಿ ನಡೆದಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉತ್ತರ ಪ್ರದೇಶ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ!
ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ ನಡೆದಿದೆ.

ಅಸ್ಸಾಂ: 3 ಅಪ್ರಾಪ್ತರ ಮೇಲೆ ಅತ್ಯಾಚಾರ ಎಸಗಿದ ಆರೋಪಿ; ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡು
ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಸಂಬಂಧ 50 ವರ್ಷದ ವ್ಯಕ್ತಿಯನ್ನು ಬಂಧಿಸಲು ಮುಂದಾದಾಗ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಉತ್ತರ ಪ್ರದೇಶ: ಮಾಜಿ ಬ್ಲಾಕ್ ಮುಖ್ಯಸ್ಥನ ಬೆಂಗಾವಲು ವಾಹನದ ಮೇಲೆ ದಾಳಿ, ಐವರಿಗೆ ಗಾಯ
ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಮಾಜಿ ಬ್ಲಾಕ್ ಮುಖ್ಯಸ್ಥ ಹಾಜಿ ಯೂನಸ್ ಅವರ ಬೆಂಗಾವಲು ಪಡೆಯ ಮೇಲೆ ಗುಂಡಿನ ದಾಳಿ ನಡೆದಿದ್ದು, ಐವರು ಗಾಯಗೊಂಡಿದ್ದಾರೆ. ಪೊಲೀಸರು ಈ ಮಾಹಿತಿ ನೀಡಿದ್ದಾರೆ.

