ರಾಜಕೀಯಆನಂದ್ ಸಿಂಗ್ ಪುತ್ರನಿಗೆ ಬಿಜೆಪಿ ಮಣೆ; ಟಿಕೆಟ್ ಆಕಾಂಕ್ಷಿಗಳಿಗೆ ಅಸಮಾಧಾನ, ತೀವ್ರ ಕುತೂಹಲ ಕೆರಳಿಸಿದ ವಿಧಾನಸಭಾ ಚುನಾವಣೆ
ಸಚಿವ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ್ ಸಿಂಗ್ ಅವರಿಗೆ ವಿಜಯನಗರ ಕ್ಷೇತ್ರದ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದ್ದು, ನೂತನ ಜಿಲ್ಲೆ ರಚನೆಯಾದ ಮೇಲೆ ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಬಿಜೆಪಿಯಿಂದ ಟಿಕೆಟ್ ಎದುರುನೋಡುತ್ತಿದ್ದ ಹಲವು ಆಕಾಂಕ್ಷಿಗಳಲ್ಲಿ ಈ ನಡೆ ಅಸಮಾಧಾನಕ್ಕೆ ಕಾರಣವಾಗಿದೆ.