Sidhu

ಪಂಜಾಬ್ ಕಾಂಗ್ರೆಸ್ ನಲ್ಲಿ ಮತ್ತೆ ಆಂತರಿಕ ಕಲಹ, ಛನ್ನಿ ವಿರುದ್ಧ ಸಿಧು ವಾಗ್ದಾಳಿ
ಪಂಜಾಬ್ ನಲ್ಲಿ ಮುಖ್ಯಮಂತ್ರಿ ಬದಲಾದರೂ ಸಹ ಚುನಾವಣೆ ಸನಿಹದಲ್ಲಿ ಆಡಳಿತಾರೂಢ ಕಾಂಗ್ರೆಸ್ ನ ಆಂತರಿಕ ಕಲಹ ಮುಗಿಯುವಂತೆ ಕಾಣುತ್ತಿಲ್ಲ.

ಪಂಜಾಬಿನ 13 ಸಮಸ್ಯೆಗಳ ಪಟ್ಟಿಯೊಂದಿಗೆ ಸೋನಿಯಾಗೆ ಪತ್ರ ಬರೆದ ಸಿಧು
2022ರ ವಿಧಾನಸಭಾ ಚುನಾವಣೆ ಪ್ರಣಾಳಿಕೆ ಸೇರಿದಂತೆ 13 ಅಂಶಗಳ ಅಜೆಂಡಾದೊಂದಿಗೆ ತಮ್ಮ ನೇತೃತ್ವದಲ್ಲಿ ಸಭೆ ನಡೆಯಬೇಕೆಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ.

ನೈತಿಕತೆಯೊಂದಿಗೆ ರಾಜಿಯಾಗಲು ಸಾಧ್ಯವಿಲ್ಲ: ರಾಜೀನಾಮೆ ಕುರಿತು ಮೌನ ಮುರಿದ ನವಜೋತ್ ಸಿಂಗ್ ಸಿಧು
ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ಹಠಾತ್ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ನವಜೋತ್ ಸಿಂಗ್ ಸಿಧು ಅವರು ಮೌನ ಮುರಿದ್ದು, ನೈತಿಕತೆಯೊಂದಿಗೆ ರಾಜಿಯಾಗಲು ಸಾಧ್ಯವಿಲ್ಲ ಎಂದು ಬುಧವಾರ ಹೇಳಿದ್ದಾರೆ.

ಅಮರಿಂದರ್ ಸಿಂಗ್ ಭೇಟಿಗೆ ಸಿಧು ಸಮಯ ಕೇಳಿಲ್ಲ: ಪಂಜಾಬ್ ಸಿಎಂ ಸಲಹೆಗಾರ
ಪಂಜಾಬ್ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಭೇಟಿಗೆ ಸಮಯ ಕೇಳಿಲ್ಲ ಎಂದು ಅಮರಿಂದರ್ ಸಿಂಗ್ ಅವರ ಸಲಹೆಗಾರರು ಮಾಹಿತಿ ನೀಡಿದ್ದಾರೆ.

ಪಂಜಾಬ್: ವಾಕ್ ಸಮರದ ನಂತರ ಅಮರೀಂದರ್ ಭೇಟಿ ಮಾಡಿದ ಸಿಧು, ಸಂಪುಟ ಸೇರುವ ಸಾಧ್ಯತೆ
ತೀವ್ರ ವಾಕ್ ಸಮರದ ಬಳಿಕ ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಬುಧವಾರ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ರೈತರ ಪ್ರತಿಭಟನೆ ಸೇರಿದಂತೆ ಹಲವು ವಿಚಾರಗಳ ಕುರಿತಂತೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.

ನ.9 ಕರ್ತಾರ್ ಪುರ್ ಕಾರಿಡಾರ್ ಉದ್ಘಾಟನಾ ಸಮಾರಂಭ: ಸಿಧುಗೆ ವೀಸಾ ನೀಡಿದ ಪಾಕಿಸ್ತಾನ
ನವೆಂಬರ್ 9 ರಂದು ನಡೆಯಲಿರುವ ಸಿಖ್ಖರ ಧಾರ್ಮಿಕ ಕ್ಷೇತ್ರ ಕರ್ತಾರ್ ಪುರ್ ಕಾರಿಡಾರ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಅವರಿಗೆ ವೀಸಾ ನೀಡಿರುವುದಾಗಿ ಪಾಕಿಸ್ತಾನ ಇಂದು ತಿಳಿಸಿದೆ.

ಪಂಜಾಬ್: ಸಚಿವ ಸಿಧು ಮೇಲೆ ಚಪ್ಪಲಿ ಎಸೆದ ಮಹಿಳೆ ಬಂಧನ
ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಮುಖಂಡ , ಸಚಿವ ನವಜೋತ್ ಸಿಂಗ್ ಸಿಧುವಿನತ್ತ ಚಪ್ಪಲಿ ಎಸೆಯಲು ಪ್ರಯತ್ನಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಕೆಂಪು ಕೋಟೆಯಲ್ಲಿ ರಾಹುಲ್ ಗಾಂಧಿ ತ್ರಿವರ್ಣ ಧ್ವಜ ಹಾರಿಸಲಿದ್ದಾರೆ: ನವಜೋತ್ ಸಿಂಗ್ ಸಿಧು
ಭವಿಷ್ಯದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲಿದ್ದಾರೆಂದು ಪಂಜಾಬ್ ರಾಜ್ಯ ಸಚಿವ ನವಜೋತ್ ಸಿಂಗ್ ಸಿಧು ಅವರು ಬುಧವಾರ ಹೇಳಿದ್ದಾರೆ...

ಬುರೇ ದಿನ್ ಮುಗಿಯಲಿದೆ, ರಾಹುಲ್ ಗಾಂಧಿ ಹೊಸ ಬಾಹುಬಲಿ: ಪಂಚ ಫಲಿತಾಂಶಕ್ಕೆ ಸಿಧು ವ್ಯಾಖ್ಯಾನ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೇಶವನ್ನಾಳುವ ಕಾಲ ಸನ್ನಿಹಿತವಾಗಿದೆ, ಬಿಜೆಪಿ ಅವನತಿ ಪ್ರಾರಂಭವಾಗಿದೆ. ರಾಹುಲ್ ಹೊಸ ಬಾಹುಬಲಿಯಾಗಿ ಬರಲಿದ್ದಾರೆ ಎಂದು ಪಂಜಾಬ್ ಸಚಿವ.....

