sikkim

ಸಿಕ್ಕಿಂ ಮಾಜಿ ಸಚಿವ ಪೌಡ್ಯಾಲ್ ಮೃತದೇಹ ಪಶ್ಚಿಮ ಬಂಗಾಳದ ಕಾಲುವೆಯಲ್ಲಿ ಪತ್ತೆ!
ಪೌಡ್ಯಾಲ್ ಅವರು ಸಿಕ್ಕಿಂ ವಿಧಾನಸಭೆಯಲ್ಲಿ ಉಪಸಭಾಪತಿಯಾಗಿ ಮತ್ತು ನಂತರ ರಾಜ್ಯದ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಸಿಕ್ಕಿಮ್ ನ ಏಕೈಕ ವಿಪಕ್ಷ ಶಾಸಕ ಆಡಳಿತ ಪಕ್ಷಕ್ಕೆ ಸೇರ್ಪಡೆ; ವಿಧಾನಸಭೆಯಲ್ಲಿ ವಿಪಕ್ಷವೇ ಇಲ್ಲ!
Lamtha SKM ಗೆ ಸೇರ್ಪಡೆಗೊಳ್ಳುವುದರೊಂದಿಗೆ, SKM ರಾಜ್ಯದ ಎಲ್ಲಾ 32 ಸ್ಥಾನಗಳನ್ನು ಹೊಂದಿರುವುದರಿಂದ ಸಿಕ್ಕಿಮ್ ವಿಧಾನಸಭೆಯಲ್ಲಿ ಯಾವುದೇ ವಿರೋಧ ಪಕ್ಷ ಇರುವುದಿಲ್ಲ.

ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ಸಿಕ್ಕಿಂ ಸಿಎಂ ಪತ್ನಿ ಕೃಷ್ಣ ಕುಮಾರಿ ಶಾಸಕಿ ಸ್ಥಾನಕ್ಕೆ ರಾಜೀನಾಮೆ
ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರ ಪತ್ನಿ ಕೃಷ್ಣ ಕುಮಾರಿ ರೈ ಅವರು ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ

2ನೇ ಬಾರಿ ಸಿಕ್ಕಿಂ ಸಿಎಂ ಆಗಿ ಜೂನ್ 9 ರಂದು ಪಿಎಸ್ ತಮಾಂಗ್ ಪ್ರಮಾಣ ವಚನ ಸ್ವೀಕಾರ
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ ಅವರು ಜೂನ್ 9 ರಂದು ಎರಡನೇ ಅವಧಿಗೆ ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಾಗಿ ಬುಧವಾರ ಹೇಳಿದ್ದಾರೆ.

ರಾಜ್ಯಪಾಲರನ್ನು ಭೇಟಿಯಾದ ಪ್ರೇಮ್ ಸಿಂಗ್ ತಮಾಂಗ್, ನೂತನ ಸರ್ಕಾರ ರಚನೆಗೆ ಹಕ್ಕು ಮಂಡನೆ
ಎಸ್‌ಕೆಎಂ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಪ್ರೇಮ್ ಸಿಂಗ್ ತಮಾಂಗ್ ಅವರು ಸೋಮವಾರ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

SKM ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆ
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್‌ಕೆಎಂ) ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆಯಾಗಿದ್ದು, ಎರಡನೇ ಬಾರಿ ಸಿಕ್ಕಿಂ ಮುಖ್ಯಮಂತ್ರಿಯಾಗಿ ಶೀಘ್ರದಲ್ಲೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ವಿಧಾನಸಭೆ ಚುನಾವಣೆ ಫಲಿತಾಂಶ: ಅರುಣಾಚಲದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು, ಸಿಕ್ಕಿಂನಲ್ಲಿ ಎರಡನೇ ಬಾರಿ ಅಧಿಕಾರಕ್ಕೆ SKM
ಹಿಮಾಲಯ ರಾಜ್ಯ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (SKM) 32 ಸದಸ್ಯ ಬಲದ ವಿಧಾನಸಭೆಯಲ್ಲಿ 20 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ. ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ನೇತೃತ್ವದ ಎಸ್‌ಕೆಎಂ ಇತರ 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ವಿಧಾನಸಭೆ ಚುನಾವಣೆ ಮತ ಎಣಿಕೆ: ಸಿಕ್ಕಿಂನಲ್ಲಿ ಆಡಳಿತಾರೂಢ ಎಸ್‌ಕೆಎಂ ಗೆಲುವಿನತ್ತ, ಅರುಣಾಚಲದಲ್ಲಿ ಬಿಜೆಪಿಗೆ ಮುನ್ನಡೆ
ಅರುಣಾಚಲ ಪ್ರದೇಶದಲ್ಲಿ ಹತ್ತು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ 60 ವಿಧಾನಸಭಾ ಕ್ಷೇತ್ರಗಳ ಪೈಕಿ 50 ಸ್ಥಾನಗಳಿಗೆ ಮತ ಎಣಿಕೆ ನಡೆಯುತ್ತಿದೆ. 10 ಗೆಲುವು ಮತ್ತು 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ ಇದೀಗ ಗೆಲುವಿಗೆ ಅರ್ಧದ ಗಡಿ ದಾಟಿದೆ.

ಅರುಣಾಚಲ ಪ್ರದೇಶ, ಸಿಕ್ಕಿಂ ಎಣಿಕೆ ದಿನಾಂಕದಲ್ಲಿ ಬದಲಾವಣೆ: ದಿಢೀರ್ ಮತ ಎಣಿಕೆ ದಿನಾಂಕ ಬದಲಿಸಿದ ಆಯೋಗ!
ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನ ಮತ ಎಣಿಕೆ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಎರಡು ರಾಜ್ಯಗಳ ಮತ ಎಣಿಕೆ ಜೂನ್ 4ರ ಬದಲಿಗೆ ಜೂನ್ 2 ರಂದೇ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

