ರಾಜಕೀಯಡ್ಯಾಮೇಜ್ ಕಂಟ್ರೋಲ್'ಗೆ ಬಿಜೆಪಿ ಮುಂದು: ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದ ನಳಿನ್ ಕುಮಾರ್ ಕಟೀಲ್
ನಟೋರಿಯಸ್ ರೌಡಿ ಶೀಟರ್ ಆಗಿದ್ದ ಸೈಲೆಂಟ್ ಸುನೀಲ ಬಿಜೆಪಿ ಸಂಸದರ ಜೊತೆ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಹಾಗೂ ಟೀಕೆಗಳಿಗೆ ಕಾರಣವಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಬಿಜೆಪಿ ಇದೀಗ ಡ್ಯಾಮೇಜ್ ಕಂಟ್ರೋಲ್'ಗೆ ಮುಂದಾಗಿದೆ.